ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ: ಸಿದ್ದರಾಮಯ್ಯ ಸವಾಲು

|
Google Oneindia Kannada News

ಕೊಪ್ಪಳ, ಜೂನ್ 29: ಕೇಂದ್ರ ಸರ್ಕಾರಕ್ಕೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿಯಿದ್ದರೆ ಅದು ರೈತರ ಸಾಲ ಮನ್ನಾ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಕೂಡಲ ಸಂಗಮದಲ್ಲಿ ಗುರುವಾರ ನಡೆದ ಎಸ್.ಆರ್. ಪಾಟೀಲ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಿದ್ದರಾಮಯ್ಯ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುವಾಗ ಹೀಗೆ ಹೇಳಿದರು.

ಕರ್ನಾಟಕಕ್ಕೆ ಕೇಂದ್ರದಿಂದ 795.54 ಕೋಟಿ ರೂ. ಬರ ಪರಿಹಾರಕರ್ನಾಟಕಕ್ಕೆ ಕೇಂದ್ರದಿಂದ 795.54 ಕೋಟಿ ರೂ. ಬರ ಪರಿಹಾರ

CM Siddaramaiah urges central government to waive off farmer loans

ಈಗಾಗಲೇ ರಾಜ್ಯ ಸರ್ಕಾರವು, ಸಹಕಾರ ಬ್ಯಾಂಕುಗಳಲ್ಲಿನ ರೈತರು ಮಾಡಿರುವ ಸಾಲದಲ್ಲಿ 50 ಸಾವಿರವರೆಗಿನ ಸಾಲವನ್ನು ಮನ್ನಾ ಮಾಡಿದೆ. ಆದರೆ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ರಾಜ್ಯ ಸರ್ಕಾರವು ಮನ್ನಾ ಮಾಡಬೇಕಿದೆ. ಕೇಂದ್ರ ಸರ್ಕಾರಕ್ಕೆ ರೈತರ ಪರವಾದ ಕಾಳಜಿ ಇದ್ದರೆ ಆ ಸಾಲ ಮನ್ನಾ ಮಾಡಲಿ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಕ್ಯಾಂಡಿಕ್ರಶ್ ಆಡಿದ ಪೊಲೀಸರುಮುಖ್ಯಮಂತ್ರಿಯಿದ್ದ ಕಾರ್ಯಕ್ರಮದಲ್ಲಿ ಕ್ಯಾಂಡಿಕ್ರಶ್ ಆಡಿದ ಪೊಲೀಸರು

ಇತ್ತೀಚೆಗೆ, ಕೇಂದ್ರ ವಿತ್ತ ಸಚಿವರಾದ ಅರುಣ್ ಜೇಟ್ಲಿ ಅವರು, ರೈತರ ಸಾಲ ಮನ್ನಾ ಸಾಧ್ಯವಿಲ್ಲ ಎಂದಿದ್ದಾರೆ. ಇದು ಕೇಂದ್ರ ಸರ್ಕಾರವು ರೈತರ ಬಗ್ಗೆ ಎಂಥ ಕಾಳಜಿ ಇಟ್ಟುಕೊಂಡಿದೆ ಎಂಬುದನ್ನು ತೋರಿಸುತ್ತದೆ. ಆದರೆ, ಇಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

English summary
Chief Minister Siddaramaiah urged central government to waive off agriculture loans of farmers and show its concern about farmenrs. He was talking to the press on Thursday (June 29th, 2017) while he came to Koppal to participate in a program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X