Industry: ಕರ್ನಾಟಕದಲ್ಲಿ ಕೈಗಾರಿಕೆ ಹೂಡಿಕೆ ಆಕರ್ಷಣೆಗೆ ಸಿದ್ದರಾಮಯ್ಯರ ಸಲಹೆಗಳು, ಪಟ್ಟಿ

ಬೆಂಗಳೂರು, ಅಕ್ಟೋಬರ್ 24: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ವಿದೇಶ ಕಂಪನಿಗಳ ಬಂಡವಾಳ ಹರಿದು ಬರುತ್ತಿದೆ. ರಾಜ್ಯದಲ್ಲಿ ಕೈಗಾರಿಕೆ ನೀತಿ ಸಹ ಈ ಹಿಂದೆ ಜಾರಿಗೆ ತರಲಾಗಿದೆ. ಮತ್ತಷ್ಟು ಕೈಗಾರಿಕೆ ಅಭಿವೃದ್ಧಿ ದೃಷ್ಟಿಯಿಂದ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಈ ವೇಳೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲರು ಇದ್ದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂಡವಾಳ ಆಕರ್ಷಣೆಗಾಗಿ ಒಂದಷ್ಟು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಅದರ ಪಟ್ಟಿ ಇಲ್ಲಿದೆ.

ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಸಿಎಂ ತಿಳಿಸಿದ್ದಾರೆ.

CM Siddaramaiah Urges Faster clearances to Boost Industrial Investment in Karnataka

* ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು.

* ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

* ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳ ಅನುಷ್ಠಾನ ಹಂತದಲ್ಲಿವೆ.

* ಸುಮಾರು ರೂ.1.5 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ.

* ಸುಪ್ರೀಂಕೋರ್ಟ್ ನ ಕಾರಣ ಹೇಳಿಕೊಂಡು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೂ ಇರುವುದೂ ಇದೇ ಸುಪ್ರೀಂ ಕೋರ್ಟ್. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆ ನಮಗೆ ಆಗುತ್ತಿದೆ ಅನ್ನುವ ಕಾರಣ ನೀಡಿದರೆ ಕ್ರಮ ಜರುಗಿಸಬೇಕಾಗತ್ತದೆ.

* ರಾಜ್ಯದಲ್ಲಿ ಕಾರ್ಯಪಡೆ ಹೆಚ್ಚಿದೆ. ಕೌಶಲ್ಯಯುತ ಕಾರ್ಮಿಕ ಬಲ ಕೂಡ ರಾಜ್ಯದಲ್ಲಿ ಹೆಚ್ಚಿದೆ. ಹೀಗಾಗಿ ಉದ್ಯೋಗ ಸೃಷ್ಟಿ ರಾಜ್ಯದಲ್ಲಿ ಹೆಚ್ಚೆಚ್ಚು ಆಗುತ್ತಿದೆ. ಕೈಗಾರಿಕೆಗಳಿಗೆ ಅನುಮತಿ ನೀಡುವ ಮತ್ತಿತರ ವಿಚಾರದಲ್ಲಿ ಪ್ರಕ್ರಿಯೆ ಇನ್ನಷ್ಟು ವೇಗ ಪಡೆಯಬೇಕು. ಇದನ್ನು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು.

* ತಮಿಳುನಾಡಿನಲ್ಲಿ 51 SEZ ಗಳಿದ್ದು ಒಟ್ಟಾರೆ 8.9% ಕೊಡುಗೆ ನೀಡುತ್ತಿವೆ. ಆದರೆ, ರಾಜ್ಯದಲ್ಲಿ ಕೇವಲ 37 SEZ (special economic zone)ಗಳಿದ್ದು ನಾವು 8.2% ರಷ್ಟು ಕೊಡುಗೆ ನೀಡುತ್ತಿದ್ದೇವೆ. ಇದರಲ್ಲೂ ರಾಜ್ಯದ ಕೊಡುಗೆಯೇ ಹೆಚ್ಚಾಗಿದೆ. ಇಂಥಾ ಅನುಕೂಲಕರ ಪರಿಸ್ಥಿತಿಯನ್ನು ಗಮನಿಸಬೇಕು.

* ಹಸಿರು ಇಂಧನ ಮೂಲಗಳಿಂದ ಕೈಗಾರಿಕೆಗಳಿಗೆ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಿಗೆ ಆದ್ಯತೆ ನೀಡಬೇಕು. ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಬೇಕು.

* ಕೇಂದ್ರ ಸರ್ಕಾರ 2 ಪ್ರಮುಖ ಕಾರ್ಮಿಕ ಸುಧಾರಣೆಗಳ ಅನುಷ್ಠಾನವನ್ನು ಪ್ರಸ್ತಾಪಿಸಿದೆ. ಕಾರ್ಮಿಕರ ಕೆಲಸದ ಅವಧಿಯನ್ನು ಮರು ನಿಗದಿಪಡಿಸುವ ಸಂದರ್ಭದಲ್ಲಿ ಕಾರ್ಮಿಕರ ಹಿತವನ್ನು ಗಮನದಲ್ಲಿಡಲಾಗುವುದು.

* ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿಗಳ ವಿಲೇವಾರಿ ಆಗುತ್ತಿಲ್ಲ ಎಂದು ದೂರುಗಳಿವೆ. ಎಲ್ಲಾ ಸೇವೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ 29 ಸೇವೆಗಳು ಏಕಗವಾಕ್ಷಿ ವ್ಯವಸ್ಥೆಯಿಂದ ಹೊರಗಿದ್ದು, ಅವುಗಳನ್ನು ಸಹ ಇದರಡಿ ತರಬೇಕು. ಎಲ್ಲಾ ಅರ್ಜಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಡಿ ಏಕೀಕೃತ ವಿಲೇವಾರಿಗೆ ಕ್ರಮ.

* ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾದರೆ ಮಾತ್ರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಹೂಡಿಕೆಸ್ನೇಹಿ ವಾತಾವರಣವನ್ನು ಉತ್ತಮ ಪಡಿಸಲು ಎಲ್ಲರೂ ಸಮನ್ವಯದಿಂದ ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಇದೇ ವೇಳೆ ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು. ಕರ್ನಾಟಕದಲ್ಲಿ 13 ಕಂಪನಿಗಳಿಂದ 27,000 ಕೋಟಿ ರೂಪಾಯಿ ಹೂಡಿಕೆಗೆ ಒಪ್ಪಿರುವುದನ್ನು ಸರ್ಕಾರದ ಗಮನಕ್ಕೆ ಎಂ ಬಿ ಪಾಟೀಲ ಅವರು ತಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+