ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ತನ್ನಿ: ಮೋದಿಗೆ ಸಿದ್ದರಾಮಯ್ಯ ಒತ್ತಾಯ

ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿರುವ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ 50ರಷ್ಟು ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ, ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎನ್ನುವುದು ನನ್ನ ಒತ್ತಾಯ ಎಂದು ಹೇಳಿದ್ದಾರೆ.

ಮೀಸಲಾತಿಯಲ್ಲಿ ಶೇ 50ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು. ಜೊತೆಗೆ ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುತ್ತೇನೆ. ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

CM Siddaramaiah Urges PM Modi To Implement Reservation In Private Sector

ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ. ನೂರು ವರ್ಷಗಳ ಇತಿಹಾಸ ನೋಡಿದರೆ, ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್‌ಎಸ್‌ಎಸ್‌ 1925ರಂದು ಪ್ರಾರಂಭವಾಗಿದ್ದು, 2025ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದು ದೂರಿದ್ದಾರೆ.

Take a Poll

ರಾಹುಲ್ ಗಾಂಧಿ ಅವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಕೂಡ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲೇ ಜಾತಿಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಜಾತಿಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಮೀಸಲಾತಿ ಶೇ 50ಕ್ಕಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ ಶೇ 50ಕ್ಕಿಂತ ಹೆಚ್ಚಾದರೆ ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಲು ಸಾಧ್ಯ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯವಾಗಿದೆ. ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

CM Siddaramaiah Urges PM Modi To Implement Reservation In Private Sector

ಮುಂದಿನ ಸಚಿವ ಸಂಪುಟದಲ್ಲಿ ಅಭಿಪ್ರಾಯ ಪಡೆದು ಚರ್ಚೆ ಮಾಡುತ್ತೇವೆ. ಬಳಿಕ ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು. ಬಜೆಟ್ ರೂಪಿಸುವಾಗ ಇದನ್ನು ಆಧಾರವಾಗಿಟ್ಟುಕೊಂಡು ಅನುದಾನ ಹಂಚಿಕೆ ಮಾಡಲಾಗುವುದು ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+