ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆದಿಚುಂಚನಗಿರಿ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

|
Google Oneindia Kannada News

ಬೆಂಗಳೂರು, ಆಗಸ್ಟ್. 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಶ್ರೀ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದು, ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.

Recommended Video

Siddaramaiah Visits Adichunchanagiri Mutt On Sunday

ಭಾನುವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದರು. ಶ್ರೀಗಳಿಗೆ ಶಾಲು ಹೊದಿಸಿ, ಫಲ ಸಮರ್ಪಣೆ ಮಾಡಿ ಆಶೀರ್ವಾದ ಪಡೆದರು.

CM Siddaramaiah visits Adichunchanagiri Mutt, Bengaluru

ಶ್ರೀ ನಿರ್ಮಲಾನಂದನಾಥ ಶ್ರೀಗಳು ಸಿದ್ದರಾಮಯ್ಯ ಅವರಿಗೆ ಹಾರ ಹಾಕಿ, ಶಾಲು ಹೊದಿಸಿ ಆಶೀರ್ವಾದ ನೀಡಿದರು. ನಂತರ ಸಿದ್ದರಾಮಯ್ಯ ಕೆಲವು ಕಾಲ ಶ್ರೀಗಳ ಜೊತೆ ಮಾತುಕತೆ ನಡೆಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, 'ಈ ಭೇಟಿಗೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಬಹಳ ದಿನದಿಂದ ಭೇಟಿ ಮಾಡಲು ಬಯಸಿದ್ದೆ. ಇಂದು ಕಾಲ ಕೂಡಿಬಂದಿದೆ' ಎಂದರು.

ಆಗಸ್ಟ್ ಮೊದಲ ವಾರದಲ್ಲಿ ಮೂರು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ, ಕಾಲ ಭೈರವೇಶ್ವರಿಗೆ ಪೂಜೆ ಸಲ್ಲಿಸಿ ಮಠಕ್ಕೆ ಭೇಟಿ ಕೊಟ್ಟಿದ್ದರು.

English summary
Karnataka Chief Minister Siddaramaiah on Sunday, August 27, 2017 visited the Adichunchanagiri Mutt at Vijayanagara, Bengaluru. Adichunchanagiri Mutt a major religious centre for the Vokkaliga community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X