ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ; ಹೈಕಮಾಂಡ್ ಬುಲಾವ್?

ಬೆಂಗಳೂರು, ಡಿಸೆಂಬರ್‌ 02: ರಾಜ್ಯ ರಾಜಕಾರಣದಲ್ಲಿ ಕಳೆದ ಒಂದು ತಿಂಗಳಿನಿಂದ ಸಿಎಂ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆಯ ಮೇರೆಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕದನ ವಿರಾಮ ಘೋಷಿಸಿದ್ದರು.

ಇದೀಗ ಬೆಂಗಳೂರಿನ ಸದಾಶಿವ ನಗರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ಈ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಲ್ಲಿ ಬೆಳಗಾವಿ ಅಧಿವೇಶನ, ಸಚಿವ ಸಂಪುಟ ಪುನಾರಚನೆ ಹಾಗೂ ನಿಗಮ ಮಂಡಳಿ ವಿಚಾರವಾಗಿಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

CM Siddaramaiah Visits DCM DK Shivakumar Residence

ಇನ್ನೂ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಟ್ವೀಟ್‌ ಮಾಡಿದ್ದು, ಕಾಂಗ್ರೆಸ್ ದೃಷ್ಟಿಕೋನದಡಿಯಲ್ಲಿ ಉತ್ತಮ ಆಡಳಿತ ಮತ್ತು ನಮ್ಮ ರಾಜ್ಯದ ನಿರಂತರ ಅಭಿವೃದ್ಧಿಗೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಇಂದು ನನ್ನ ನಿವಾಸದಲ್ಲಿ ಮುಖ್ಯಮಂತ್ರಿಗಳಿಗೆ ಉಪಾಹಾರ ಕೂಟವನ್ನು ಆಯೋಜಿಸಿದೆ ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಶಿವಕುಮಾರ್ ಮತ್ತು ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಸ್ವಾಗತಿಸಿದರು. ಮುಖ್ಯಮಂತ್ರಿಗಳು ಆಗಮಿಸಿದಾಗ ಶಿವಕುಮಾರ್ ಅವರ ಸಂಬಂಧಿಯಾಗಿರುವ ಕುಣಿಗಲ್ ಶಾಸಕ ಎಚ್.ಡಿ. ರಂಗನಾಥ್ ಉಪಸ್ಥಿತರಿದ್ದರು.

ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಬ್ಬರು ನಾಯಕರು ನಡೆಸಿದ ಇದೇ ರೀತಿಯ ಸಭೆಯ ನಂತರ ನಂತರ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಅಧಿಕಾರ ಹಂಚಿಕೆ ಕುರಿತು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ನಡೆದ ಸಭೆಯ ನಂತರ, ಇಬ್ಬರೂ ನಾಯಕರು ಮುಂದೆ ಯಾವುದೇ ಗೊಂದಲ ಉಂಟಾಗುವುದಿಲ್ಲ. ನಾವು ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ್ದರು.

ಇನ್ನೂ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು, ನಾನು ಮತ್ತು ಮುಖ್ಯಮಂತ್ರಿಗಳು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕರ್ನಾಟಕಕ್ಕೆ ನಮ್ಮ ಭರವಸೆಗಳನ್ನು ಈಡೇರಿಸಲು ನಮ್ಮ ಸಾಮೂಹಿಕ ಪ್ರಯತ್ನಗಳನ್ನು ಚರ್ಚಿಸಲು ಮತ್ತು ಬಲಪಡಿಸಲು ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಉಪಾಹಾರಕ್ಕೆ ಆಹ್ವಾನಿಸಿದ್ದೇನೆ ಎಂದು ಸೋಮವಾರ ಡಿ ಕೆ ಶಿವಕುಮಾರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+