Siddaramaiah: ಸಂಧಿ ಎಂದರೇನು? ಸಿಎಂ ಸಿದ್ದರಾಮಯ್ಯ ವ್ಯಾಕರಣ ಪಾಠಕ್ಕೆ ವಿದ್ಯಾರ್ಥಿಗಳು ಫುಲ್ ಖುಷ್
ಬೆಂಗಳೂರು, ಜುಲೈ 05: ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಇಂದು ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 250 ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಮೊದಲಿಗೆ 10 ನೇ ತರಗತಿಗೆ ಭೇಟಿ ಕೊಟ್ಟ ಸಿಎಂ ಮತ್ತು ಸಚಿವರು, ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಪಠ್ಯ, ಬಾತ್ ರೂಂ ಕಿಟ್ ಗಳ ಸಮರ್ಪಕ ವಿತರಣೆ ಆಗ್ತಿದೆ ಎಂದ ವಿದ್ಯಾರ್ಥಿಗಳು. ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದ ಸಿಎಂ ಸಿದ್ದರಾಮಯ್ಯ, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿತ್ತು ಎಂದ ವಿದ್ಯಾರ್ಥಿಗಳು. ಆಗಾಗ ಪಲಾವ್ ಕೊಡ್ತಾರೆ ಎಂದು ವಿದ್ಯಾರ್ಥಿಗಳು ಖುಷಿಪಟ್ಟರು.

ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.
ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು? ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ ಸಿದ್ದರಾಮಯ್ಯ 94-95 ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಈ ವೇಳೆ ಮಕ್ಕಳು ಚಪ್ಪಾಳೆ ತಟ್ಟಿದರು.
ಕಳೆದ ಬಾರಿ SSLC ಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್, ಒಬ್ಬ ವಿಧ್ಯಾರ್ಥಿನಿ ಮಾತ್ರ ಸೆಕೆಂಡ್ ಬಂದಿದ್ದಾಗಿ ಶಿಕ್ಷಕರ ವಿವರಣೆ ನೀಡಿದರು. ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದರು.
ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದರು. ಮನುಷ್ಯರ ನಡುವಿನ ತಾರತಮ್ಯ, ಜಾತಿ ವ್ಯವಸ್ಥೆ ವಿರೋಧಿಸಿ ಸಾಮಾಜಿಕ ಕ್ರಾಂತಿ ನಡೆಸಿದ ಬಸವಣ್ಣನವರು...ಎಂದು ಸಿಎಂ ತಾವೇ ಮಕ್ಕಳಿಗೆ ಉತ್ತರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, MLC ಪ್ರಕಾಶ್ ರಾಥೋಡ್ ಸೇರಿ ಇತರರು ಉಪಸ್ಥಿತರಿದ್ದರು.
ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು
ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.
ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು ಎಂದು ಪ್ರತಿಕ್ರಿಯಿಸಿದರು.












Click it and Unblock the Notifications