ಪಟಾಕಿ ದುರಂತದ ಬಗ್ಗೆ ಕ್ರಮ, ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
ಮೈಸೂರು: ರಾಜಧಾನಿ ಬೆಂಗಳೂರಿನ ಹೊರವಲಯ ಹಾಗೂ ತಮಿಳುನಾಡು ಗಡಿಯ ಭಾಗದಲ್ಲಿ ನಿನ್ನೆ ಸಂಭವಿಸಿದ ಪಟಾಕಿ ದುರಂತ ಇಡೀ ದೇಶದಲ್ಲಿ ಸುದ್ದಿಯಾಗಿದೆ. ಈ ದುರಂತದ ಬಗ್ಗೆ ಆಕ್ರೋಶ ಕೂಡ ಮೊಳಗಿದೆ. ಇದೇ ಸಮಯದಲ್ಲಿ ಕರ್ನಾಟಕ ಸಿಎಂ ಕೂಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಾಗಾದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಅತ್ತಿಬೆಲೆಯಲ್ಲಿ ನಡೆದ ಅಗ್ನಿ ದುರಂತದ ಹಿನ್ನೆಲೆ ಗೋದಾಮು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಲ್ಲಿ ಸಿಎಂ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ದುರಂತದಲ್ಲಿ 14 ಜನ ಮೃತಪಟಿದ್ದು, ಪಟಾಕಿ ಗೋದಾಮಿನಲ್ಲಿ ಮುನ್ನೆಚ್ಚರಿಕಾ & ಸುರಕ್ಷಾ ಕ್ರಮ ಕೈಗೊಂಡಿದ್ದಾರೆಯೇ? ಎಂಬುದನ್ನ ಈಗ ಪರಿಶೀಲಿಸಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಇಂದು ಸಿಎಂ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ದುರಂತ ಸಂಭವಿಸಿದ್ದು ಹೇಗೆ?
ಅಂದಹಾಗೆ ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಲೂಕಿನ ಅತ್ತಿಬೆಲೆಯ ಪಟಾಕಿ ಗೋಡಾನ್‌ನಲ್ಲಿ ಲಾರಿಯಿಂದ ಪಟಾಕಿ ಇಳಿಸುವಾಗ ಬೆಂಕಿ ಕಾಣಿಸಿತ್ತು. ಆಗ ಬೆಂಕಿ ದಿಢೀರ್ ಆವರಿಸಿದ ಪರಿಣಾಮ 14 ಜನ ಮೃತಪಟಿದ್ದಾರೆ. ಈ ವೇಳೆ ಗೋಡಾನ್‌ನಲ್ಲಿ 20 ಜನ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಇದೆ. ಇನ್ನು ಈ ದುರಂತದ ಬಗ್ಗೆ ಪೊಲೀಸರು ತನಿಖೆ ಕೂಡ ನಡೆಸುತ್ತಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯ ಕೂಡ ದುರಂತದ ಹಿನ್ನೆಲೆ ಕಠಿಣ ಕ್ರಮವನ್ನ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ದೇಶಾದ್ಯಂತ ಸುದ್ದಿಯಾದ ಬೆಂಗಳೂರಿನ ಘಟನೆ
ಇನ್ನು ಹೀಗೆ ರಾಜಧಾನಿ ಬೆಂಗಳೂರು ಹೊರವಲಯ ಹಾಗೂ ಕರ್ನಾಟಕ & ತಮಿಳುನಾಡು ಗಡಿಭಾಗದಲ್ಲಿ ಸಂಭವಿಸಿದ ಪಟಾಕಿ ದುರಂತ ದೊಡ್ಡ ಸದ್ದು ಮಾಡಿದೆ. ದೇಶಾದ್ಯಂತ ಈ ವಿಚಾರ ಸುದ್ದಿಯಾಗ್ತಿದೆ. ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕೂಡ ಆಗ್ರಹವೂ ಇದೀಗ ಕೇಳಿಬಂದಿದೆ. ಹೀಗಾಗಿಯೇ ಸದ್ಯ ಸಿಎಂ ಸಿದ್ದರಾಮಯ್ಯ ಕೂಡ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಮತ್ತೊಂದು ಕಡೆ ಕೇಂದ್ರ ಬರ ಅಧ್ಯಯನ ತಂಡದ ವಿರುದ್ಧ ರಾಜ್ಯದ ಕೃಷಿಕರು, ಬೇಸರ ಹೊರಹಾಕಿದ್ದಾರೆ. ರಾಜ್ಯದಲ್ಲಿ ಬರ ಎದುರಾಗಿರುವ ವೇಳೆಯೇ ರೈತರ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈ ಕುರಿತು ಕೂಡ ಸಿಎಂ ಇಂದು ಮೈಸೂರಿನಲ್ಲಿ ಮಾತನಾಡ್ತಾ, ಪ್ರತಿಕ್ರಿಯೆ ನೀಡಿದ್ದಾರೆ. ವಸ್ತುಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ವರದಿ ಮಾಡಲು ತಂಡಕ್ಕೆ ತಿಳಿಸಲಾಗಿದೆ ಎಂದಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಕನ್ನಡಿಗರ ಪರಿಸ್ಥಿತಿ ಬಗ್ಗೆ ತಿಳಿಸಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.












Click it and Unblock the Notifications