Microfinance: ಮೈಕ್ರೋ ಫೈನಾನ್ಸ್‌ ದೌರ್ಜನ್ಯ ಕೊನೆಯಾಗಲಿದೆ; ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಹಲವು ಆತ್ಮಹತ್ಯೆ ಪ್ರಕರಣಗಳು ವರದಿಯಾದ ಬಳಿಕ ಎಚ್ಚೆತ್ತಿರುವ ಕರ್ನಾಟಕ ಸರ್ಕಾರ, ಸಾಲಗಾರರ ದೌರ್ಜನ್ಯವನ್ನು ಹತ್ತಿಕ್ಕಲು ಕಾನೂನು ರೂಪಿಸಿದೆ. ಸರ್ಕಾರ ಕಳಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದು ಹೊಸ ಕಾನೂನು ಜಾರಿಯಾಗಿದೆ.

ಹೊಸ ಕಾನೂನು ಜಾರಿ ಮಾಡಿರುವ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಮುಂದೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ದೌರ್ಜನ್ಯ ನಿಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನೊಂದವರಿಗೆ ಇನ್ನುಮುಂದೆ ಕಾನೂನು ರಕ್ಷಣೆ ಕೂಡ ಸಿಗಲಿದೆ ಎಂದು ಹೇಳಿದ್ದಾರೆ.

cm siddaramaiah warns microfinance institutes governor approves ordinance

ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹೊಸ ಕಾನೂನಿನ ಬಗ್ಗೆ ಮಾಹಿತಿ ನೀಡಿದ್ದಾರೆ. "ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ "ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ - 2025" ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ" ಎಂದು ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್‌ನಲ್ಲಿ‌ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎನ್ನುವ ಭರವಸೆ ಇದೆ ಎಂದು ಹೇಳಿದ್ದಾರೆ.

ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಜನತೆಗೆ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ವರ್ತನೆಯಿಂದಾಗಿ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗಿದ್ದವು. ಮನೆಯಲ್ಲಿದ್ದವರನ್ನು ಹೊರಗೆಳೆದು ಬೀಗ ಹಾಕಿದ್ದ ಘಟನೆಗಳು ಬೆಳಕಿಗೆ ಬಂದಿದ್ದವು. ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ತೀವ್ರ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಹಲವು ಘಟನೆಗಳು ನಡೆದ ನಂತರ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಕರ್ನಾಟಕ ಸರ್ಕಾರ ಇದನ್ನು ತಡೆಯಲು ಸೂಕ್ತ ಕಾನೂನು ಜಾರಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+