ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೇ, ನನ್ನ ಬಂಧಿಸುವ ಧೈರ್ಯ ಇದೆಯೇ?: ಆರ್.ಅಶೋಕ್
ಬೆಂಗಳೂರು, ಜನವರಿ 01: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು, ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾಗಿತ್ತು. ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಯಾಗಲು ದಿನಗಣನೆ ಶುರುವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶಾದ್ಯಂತ ಜನರು ಕಾತರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ಇದನ್ನು ಭಯವೆಂಬಂತೆ ಬಿಂಬಿಸುತ್ತಿದೆ.

3 ದಶಕದ ಹಿಂದಿನ ಕೇಸ್: ಜೈಲು ಶಿಕ್ಷೆ
ಇದೇ ವೇಳೆ ಹುಬ್ಬಳ್ಳಿಯಿಂದ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಇಬ್ಬರನ್ನು 30 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಜೈಲಿಗೆ ಕಳುಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಉದ್ಘಾಟನೆಯ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಸಂದರ್ಭದಲ್ಲಿ ಇಂತಹ ಕ್ರಮವನ್ನು ಸರ್ಕಾರ ಕೈಗೊಂಡಿದೆ. ನಾನು ಕೂಡ ಆಗ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೆ. ಈಗ ನನ್ನನ್ನೂ ಬಂಧಿಸುತ್ತೀರಾ? ಅಷ್ಟು ಧೈರ್ಯ ಇದೆಯಾ? ಎಂದು ರಾಜ್ಯ ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನಿಸಿದರು.
ಕಾರ್ಯಕರ್ತರ ಮೇಲೆ ಹಾಕಿದ ಕೇಸು ವಾಪಸ್ ಪಡೆಯಬೇಕು. ಹಳೆಯ ಪ್ರಕರಣ ಹೊರತೆಗೆದು ಬಂಧಿಸಲು ಪೊಲೀಸ್ ಇಲಾಖೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಇಂತಹ ದ್ವೇಷ ರಾಜಕಾರಣದ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಿಪ್ಪು ಜಯಂತಿ ಮಾಡುವವರು ರಾಮನನ್ನು ಪೂಜಿಸಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅವರಿಗೆ ಕೇಸರಿ ಕಂಡರೆ ಆಗಲ್ಲ, ನಾಮ ಹಚ್ಚಿದರೆ ಸಮಸ್ಯೆ ಕಂಡುಬರುತ್ತದೆ. ಆದರೆ ಮಸೀದಿಯಲ್ಲಿ ಟೋಪಿ ಹಾಕಿಕೊಳ್ಳುತ್ತಾರೆ. ವೋಟಿಗಾಗಿ ಧರ್ಮ, ಜಾತಿ ಒಡೆಯುವುದು ಅವರ ಗುಣ. ಅವರ ರಕ್ತದ ಕಣದಲ್ಲೂ ಒಡೆಯುವ ಗುಣ ಇದೆ. ಬ್ರಿಟಿಷರ ಒಡೆಯುವ ಗುಣ ಕಾಂಗ್ರೆಸ್ ನ ಎಲ್ಲರಲ್ಲೂ ಇದೆ. ಈ ಹಿಂದೆ ವೀರಶೈವ ಲಿಂಗಾಯತರನ್ನು ಒಡೆಯುವ ಕೆಲಸ ಮಾಡಿದ್ದರು ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ನ ಶಾಸಕರೇ ಹೇಳಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಹೋದರೆ ಜನರು ಬಯ್ಯುತ್ತಿದ್ದಾರೆ. ಹೀಗಾಗಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ, ಒಡಕು ಬಂದಿದೆ. ಮುಖ್ಯಮಂತ್ರಿಯವರ ಬದಲಾವಣೆಯೂ ಆಗಬಹುದು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಸಿಎಂ ಬದಲಾವಣೆಯ ಸುಳುಹು ನೀಡಿದ್ದಾರೆ.
ಚುನಾವಣೆ ಬಳಿಕ ದೊಡ್ಡ ಬದಲಾವಣೆ
ಇನ್ನೂ ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ (ಕಾಂಗ್ರೆಸ್) ದೊಡ್ಡ ಬದಲಾವಣೆಗಳನ್ನು ಜನರು ನಿರೀಕ್ಷೆ ಮಾಡಬಹುದು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರಿಂದ ಅನುಭವದ ಆಧಾರದಲ್ಲಿ ಈ ಬಗ್ಗೆ ಹೇಳಿದ್ದಾರೆ ಎಂದರು.
ಮುಖ್ಯಮಂತ್ರಿಯವರು ಆರ್ಥಿಕ ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ. ಯಾರು ಸರ್ಕಾರದ ವಿರುದ್ಧ ಮಾತಾಡುತ್ತಾರೋ ಅವರಿಗೆ ಬೇಗ ಉನ್ನತ ಹುದ್ದೆ ಸಿಗುವುದು ಸಹಜ. ರಮೇಶ್ ಕುಮಾರ್ ಅವರಿಗೂ ಹಿಂದೆ ಹೀಗೆಯೇ ಹುದ್ದೆ ಸಿಕ್ಕಿತ್ತು. ಇದು ಕಾಂಗ್ರೆಸ್ ನಲ್ಲಿರುವ ಚಾಳಿ ಎಂದು ಅವರು ವ್ಯಂಗ್ಯವಾಡಿದರು.
ಹೊಸ ವರ್ಷದಲ್ಲಿ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗಲಿ. ಕಳೆದ ಏಳು ತಿಂಗಳಿಂದ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮರು ಚಾಲನೆ ದೊರೆಯಲಿ ಎಂದು ಆರ್.ಅಶೋಕ್ ಆಶಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications