BREAKING : ಸಿಎಂ ಸಿದ್ದರಾಮಯ್ಯ ಆಪ್ತ ಎಸ್. ಜಯಣ್ಣ ನಿಧನ

ಬೆಂಗಳೂರು,ಡಿಸೆಂಬರ್‌ 10: ಕೊಳ್ಳೇಗಾಲದ ಮಾಜಿ ಶಾಸಕರು ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದಂತಹ ಎಸ್ ಜಯಣ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು (ಮಂಗಳವಾರ) ಅವರು ನಿಧನ ಹೊಂದಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆ ಇತ್ತು ಎಂದು ಸಹ ಅವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು ಈ ವೇಳೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಅವರು ನಿಧನರಾಗಿದ್ದಾರೆ. ಎಸ್ ಜಯಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಳ ಆಪ್ತರಾಗಿದ್ದರು.

CM Siddaramaiah s close aide S Jayanna passes away

ಮಾಜಿ ಶಾಸಕ ಎಸ್ .ಜಯಣ್ಣ ಅವರ ನಿಧನಕ್ಕೆ ಸಿಎಂ ಸಂತಾಪ

ಕೊಳ್ಳೇಗಾಲ ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಸಾವಿನ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಜಯಣ್ಣ ಅವರ ಸಾವಿನ ಸುದ್ದಿ ಆಘಾತ ತಂದಿದೆ. ಜಯಣ್ಣ ನನ್ನ ಆತ್ಮೀಯರು. ನಮ್ಮ ನಡುವೆ ದೀರ್ಘಕಾಲದ ಒಡನಾಟವಿತ್ತು. ಇವರು 1994 ರಲ್ಲಿ ಜೆಡಿಎಸ್ ನಿಂದ ಹಾಗೂ 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿದ ಜಯಣ್ಣ ಜನಾನುರಾಗಿ ಶಾಸಕರಾಗಿದ್ದರು. ಜನರ ಕಷ್ಟಗಳಿಗೆ ಸದಾ ಮಿಡಿಯುತ್ತಿದ್ದರು.

ಡಿಸೆಂಬರ್ ಏಳರಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜೊತೆಗಿದ್ದರು. ಅವರ ಮನೆಯಲ್ಲಿಯೇ ಊಟ ಮಾಡಿ ಬಂದಿದ್ದನ್ನು ಸ್ಮರಿಸಿದರು ಮುಖ್ಯಮಂತ್ರಿಗಳು, ಜಯಣ್ಣ ಅವರ ಸಾವು ವೈಯಕ್ತಿಕವಾಗಿ ಆಘಾತ ತಂದಿದೆ. ಅವರ ನಿಧನದಿಂದ ಜನಪ್ರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ.

ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+