Mysuru Airport: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು, ಜನವರಿ 10: ರಾಜ್ಯದ ಹಲವೆಡೆ ವಿಮಾನ ನಿಲ್ದಾಣ ಕಾಮಗಾರಿಗಳ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಗರಿ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ಕುರಿತು ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಶುಕ್ರವಾರ) ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮೈಸೂರು ಜಿಲ್ಲಾಭಿವೃದ್ಧಿ ಕುರಿತಾದ ಸಭೆಯಲ್ಲಿ ಮಾತನಾಡಿ, ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

CM Siddaramaiah s important information regarding Mysore airport expansion

ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ. ಯೋಜನೆಯಡಿ ಇನ್ನೂ 46 ಎಕ್ರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕ್ರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕ್ರೆ ಪಾವತಿ ಆಗಬೇಕಿದೆ. ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು.

ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ ನೀಡಿದರು. ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದರು.

ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ. ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣ, ಸರಗೂರು, ತಗಡೂರುಗಳಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದರು.

ಕೆಆರ್‌ ಆಸ್ಪತ್ರೆಯಲ್ಲಿ ರೂ. 24 ಕೋಟಿ ವೆಚ್ಚದಲ್ಲಿ ಡಯಾಲಿಸಿಸ್‌ ಕೇಂದ್ರ, ಕಿದ್ವಾಯಿ ಆಸ್ಪತ್ರೆ ಮೂರನೇ ಮಹಡಿ ನಿರ್ಮಾಣ ಕಾಮಗಾರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ.

ಹೊಸ ಬಡಾವಣೆ ಮಾಡುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಖಾಸಗಿ ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ. ಈ ಎಲ್ಲಾ ಸಮಸ್ಯೆಗಳ ಕುರಿತು ಚರ್ಚಿಸಲು ನಗರಪಾಲಿಕೆ, ಮುಡಾದ ಪ್ರತ್ಯೇಕ ಸಭೆ ಕರೆಯಲು ಸೂಚನೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+