Lok Sabha Election 2024 : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ ಮಾಹಿತಿ
ಉತ್ತರ ಕನ್ನಡ, ಮಾರ್ಚ್ 06: ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತಯಾರಿ ನಡೆಸಿದ್ದು, ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಮುಂದಾಗಿದ್ದು, ನಾಳೆ ಪಟ್ಟಿ ಅಂತಿಮಗೊಳ್ಳಲಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮುಂದಿನ ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆ ಆರಂಭಿಸಿದೆ. ಎರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಬಾರಿ ಅಭ್ಯರ್ಥಿಗಳ ಆಯ್ಕೆ ಅಷ್ಟೊಂದು ಸಮಸ್ಯೆ ಆಗಿಲ್ಲ. ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ಖಾಸಗಿ ಸಂಸ್ಥೆಯೊಂದರ FSL ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.












Click it and Unblock the Notifications