ಪರಮೇಶ್ವರ್ ಮನೆಗೆ ‌ಸಿದ್ದರಾಮಯ್ಯ ದಿಢೀರ್ ಭೇಟಿ​; ಕುತೂಹಲ ಕೆರಳಿಸಿದ ಮಾತುಕತೆ: ಚರ್ಚೆಯಾಗಿದ್ದೇನು?

ಬೆಂಗಳೂರು, ಅಕ್ಟೋಬರ್‌ 28: ರಾಜ್ಯ ವಿಧಾನಸಭಾ ಚುನಾವಣೆಯಲಿ 135 ಸ್ಥಾನಗಳ ಮೂಲಕ ಐತಿಹಾಸಿಕ ಗೆಲುವ ಸಾಧಿಸಿವ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ದಿನದಿಂದ ದಿನಕ್ಕೆ ಅಸಮಾಧಾನಿತ ಶಾಸಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರದ ವಿರುದ್ದ ಸ್ವಪಕ್ಷದ ನಾಯಕರ ಹೇಳಿಕೆಯೂ ವಿಪಕ್ಷಗಳಿಗೆ ಆಹಾರವಾಗಿದೆ.

ಈಗಾಗಲೇ ಸಚಿವ ಸ್ಥಾನದಿಂದ ವಂಚಿತರಾದ ಹಿರಿಯ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಬಹಿರಂಗವಾಗಿ ಅಸಮಾಧಾನವನ್ನ ಹೊರ ಹಾಕಿದ್ದಾರೆ. ಇನ್ನೂ ಕಾಂಗ್ರೆಸ್‌ ಸರ್ಕಾರ ಬಂದು ಆರು ತಿಂಗಳು ಪೂರೈಸುವ ಮೊದಲೇ ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವ ಚರ್ಚೆ ಒಂದು ಕಡೆಯಾದ್ರೆ, ಇನ್ನೊಂದು ಕಡೆ ಸಚಿವ ಸಂಪುಟ ಪುನಾರಚನೆ ಹಾಗೂ ಬೆಳಗಾವಿ ರಾಜಕಾರಣ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.

CM Siddaramaiahs Sudden Visit To Home Ministers Parameshwara House

ಅಲ್ಲದೇ ರಾಜ್ಯದ ಹುಲಿ ಉಗುರು ಪ್ರಕರಣದ ಕಾವು ಜೋರಾಗಿದ್ದು, ಇದರ ಬೆನ್ನಲ್ಲೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (ಅಕ್ಟೋಬರ್‌ 27) ಶುಕ್ರವಾರ ದಿಢೀರ್ ಭೇಟಿ ನೀಡಿದ್ದು, ಕಳೆದ ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಇನ್ನೂ ಶುಕ್ರವಾರ ಮಧ್ಯಾನ್ಹ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು, ಸಿದ್ದರಾಮಯ್ಯ ಅವರ ಜೊತೆಗೆ ಎರಡು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದರು. ಹೀಗಾಗಿ ಈ ಎಲ್ಲಾ ಬೆಳವಣಿಗಳ ನಡುವೆ ಪರಮೇಶ್ವರ್‌ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿರುವುದು ಭಾರಿ ಕುತೂಹಲ ಕೆರಳಿಸಿದೆ ಎನ್ನಲಾಗಿದೆ.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದಾಶಿವ ನಗರದಲ್ಲಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಮನೆಗೆ ಬರುವುದಕ್ಕೂ ಮೊದಲು ಸಚಿವರಾದ ಸತೀಶ್‌ ಜಾರಕಿಹೊಳಿ ಇದ್ದರು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಭೋಜನ ಮಾಡಿಕೊಂಡು ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಚಿವರಾದ ಸತೀಶ್‌ ಜಾರಕಿಹೊಳಿ ನಡುವೆ ಅಸಮಾಧಾನ ಸೃಷ್ಠಿಯಾಗಿದ್ದು, ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಜಾರಕಿಹೊಳಿ ಅಸಮಾಧಾನಗೊಂಡು ಶಾಸಕರ ಮೂಲಕ ಶಕ್ತಿ ಪ್ರದರ್ಶನಕ್ಕೆ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಶುಕ್ರವಾರ ಮಧ್ಯಾನ್ಹ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ರಾಜಕಾರಣದ ಕುರಿತು ಚರ್ಚಿಸಿ ಸಂಧಾನ ಮಾಡಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+