Karnataka Budget 2025: ರಾಜ್ಯ ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್: ಯಾವೆಲ್ಲಾ ನಿರೀಕ್ಷೆಗಳು ಈಡೇರಲಿವೆ?
Karnataka Budget 2025: ರಾಜ್ಯದ 2025ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 07) ಇನ್ನೂ ಕೆಲವೇ ಕ್ಷಣಗಳಲ್ಲಿ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯದ ಜನರ ಕುತೂಹಲ ಕೆರಳಿಸುವಂತಹ ಟ್ವೀಟ್‌ವೊಂದನ್ನು ಮಾಡಿದ್ದಾರೆ. ಹಾಗಾದ್ರೆ ಅದರಲ್ಲಿ ಏನೆಲ್ಲಾ ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಹಾಣಕಾಸು ಖಾತೆ ಹೊಂದಿರುವ ಅವರು ಮಂಡನೆ ಮಾಡುತ್ತಿರುವ ದಾಖಲೆಯ 16ನೇ ಬಜೆಟ್ ಇದಾಗಿದೆ. ಈ ಹಿನ್ನೆಲೆ ಇದೀಗ ಗ್ಯಾರಂಟಿ, ಅಭಿವೃದ್ಧಿಯಂತಹ ಹೊಸ ಯೋಜನೆಗಳತ್ತ ಇಡೀ ರಾಜ್ಯದ ಜನರ ಚಿತ್ತ ನೆಟ್ಟಿದೆ. ಇನ್ನೂ ಬಜೆಟ್ ಮಂಡನೆಗೂ ಮುನ್ನ ಕುತೂಹಲಕಾರಿ ಟ್ವೀಟ್‌ವೊಂದನ್ನು ಸಿಎಂ ಸಿದ್ದರಾಮಯ್ಯ ಅವರು ಮಾಡಿದ್ದಾರೆ.

"ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ," ಎಂದು ತಮ್ಮ ಟ್ವೀಟ್ ಖಾತೆಯಲ್ಲಿ ತಿಳಿಸಿದ್ದಾರೆ.
"ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ," ಅಂತಲೂ ತಿಳಿಸಿದ್ದಾರೆ.
ಈ ಬಾರಿಯ ಸಿದ್ದರಾಮಯ್ಯ ಅವರು 16ನೇ ಬಾರಿಗೆ ರಾಜ್ಯದ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ಹಂಚಿಕೆ 4 ಲಕ್ಷ ಕೋಟಿ ತಲುಪುವ ನಿರೀಕ್ಷೆಯಿದೆ. ಕಳೆದ ಬಾರಿ ಅಂದರೆ 2024-25ರಲ್ಲಿ 3.71 ಲಕ್ಷ ಕೋಟಿ ರೂಪಾಯಿ ಬಜೆಟ್ ಮಂಡಿಸಿದ್ದರು. ಇದರಲ್ಲಿ ಶೇಕಡಾ 62 ಮಾತ್ರ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಅವರು ಬಳಿಗ್ಗೆ 10:15ರ ಸುಮಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಅವರ ಕಾರ್ಯಕಲಾಪಗಳ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ರಾಜ್ಯ ಸರ್ಕಾರ ಚುನಾವಣೆ ವೇಳೆ ಕೊಟ್ಟ ಮಾತಿನಂದೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು, ಯೋಜನೆಗಳನ್ನು ಮುಂದುವರೆಸಬೇಕಾದ ಒತ್ತಡ ಸರ್ಕಾರದ ಮೇಲಿದೆ. ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗು ಸರ್ಕಾರ ಹಣ ನೀಡಬೇಕಿದೆ.
ಗ್ಯಾರಂಟಿ ಜೊತೆಗೆ ರಾಜ್ಯದ ಆರ್ಥಿಕತೆಗೆ ಅಭಿವೃದ್ಧಿಗೆ ಸಾಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವಂತ ಯೋಜನೆಗಳನ್ನು ಬಜೆಟ್‌ನಲ್ಲಿ ಮಂಡಿಸಬೇಕಿದೆ. ರಾಜ್ಯದ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಸಮಯದಲ್ಸಲಿ ರ್ಕಾರ ಎಷ್ಟು ಮೊತ್ತದ ಹೊಸ ಸಾಲವನ್ನು ಮಾಡುತ್ತದೆಯೋ ಎಂಬ ಆತಂಕವೂ ಮತ್ತೊಂದಡೆ ಇದೆ.












Click it and Unblock the Notifications