ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ರಾಜ್ಯೋತ್ಸವ; 64 ಪ್ರಶಸ್ತಿಗೆ 1,700 ಅರ್ಜಿಗಳು!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25 : ನವೆಂಬರ್ ತಿಂಗಳು ಹತ್ತಿರ ಬಂತು. ಕನ್ನಡ ರಾಜ್ಯೋತ್ಸವದಂದು ಸರ್ಕಾರ ವಿವಿಧ ಕ್ಷೇತ್ರದ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. ಈ ಬಾರಿ 64 ಗಣ್ಯರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು, 1,700 ಅರ್ಜಿಗಳು ಬಂದಿವೆ.

ಅಕ್ಟೋಬರ್ 26ರ ಶನಿವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ? 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ?

ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಿ. ಟಿ. ರವಿ ನೇತೃತ್ವದ ಸಮಿತಿ ಅರ್ಹರನ್ನು ಆಯ್ಕೆ ಮಾಡಲಿದೆ.

ಕನ್ನಡ ಶಾಲೆ ಮುಚ್ಚದಂತೆ ಕನ್ನಡಪರ ಹೋರಾಟಗಾರರ ಪ್ರತಿಭಟನೆಕನ್ನಡ ಶಾಲೆ ಮುಚ್ಚದಂತೆ ಕನ್ನಡಪರ ಹೋರಾಟಗಾರರ ಪ್ರತಿಭಟನೆ

Kannada Rajyotsava Award

ಈ ಬಾರಿ 64ನೇ ಕನ್ನಡ ರಾಜ್ಯೋತ್ಸವ ಆದ್ದರಿಂದ, 64 ವಿವಿಧ ಕ್ಷೇತ್ರದ ಗಣ್ಯರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಪ್ರಶಸ್ತಿಗಾಗಿ 1,700 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಇವುಗಳಲ್ಲಿ 64 ಗಣ್ಯರನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.

ಕನ್ನಡ ನಾಮಫಲಕ ಇಲ್ಲದಿದ್ದರೆ ಉದ್ದಿಮೆ, ಅಂಗಡಿ ಪರವಾನಗಿ ರದ್ದು ಕನ್ನಡ ನಾಮಫಲಕ ಇಲ್ಲದಿದ್ದರೆ ಉದ್ದಿಮೆ, ಅಂಗಡಿ ಪರವಾನಗಿ ರದ್ದು

ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಅಕ್ಟೋಬರ್ 31ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ.

ನವೆಂಬರ್ 1ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿಯನ್ನು ಪ್ರಧಾನ ಮಾಡುತ್ತಾರೆ. 2018ರಲ್ಲಿ 63 ಗಣ್ಯರಿಗೆ ಪಶಸ್ತಿಯನ್ನು ಪ್ರಧಾನ ಮಾಡಲಾಗಿತ್ತು.
2018ರಲ್ಲಿ ನವೆಂಬರ್ 1ರ ಬದಲಾಗಿ ನವೆಂಬರ್ 29ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು.

English summary
Karnataka government will distribute Kannada Rajyotsava Award 2019 for 64 people. 1, 700 application come for the award. Chief Minister B.S.Yediyurappa to chair meeting on October 26 to final the list.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X