ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮ್ಮಿಶ್ರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಬಂದ್‌ಗೆ ಕರೆ

By Nayana
|
Google Oneindia Kannada News

Recommended Video

ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾದ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಜು.16: ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21ರಂದು ಸ್ವಯಂಪ್ರೇರಿತ ಶಾಲಾ-ಕಾಲೇಜುಗಳ ಬಂದ್‌ಗೆ ಕರೆ ನೀಡಿದ್ದಾರೆ.

ಹಿಂದಿ ಕಾಂಗ್ರೆಸ್‌ ಸರ್ಕಾರ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಎಲ್ಲಾ ಜನಾಂಗದ ಮಕ್ಕಳಿಗೆ ಉಚಿತ ಬಸ್‌ ಪಾಸ್‌ ನೀಡಿರುವದಾಗಿ ಭರವಸೆ ನೀಡಿತ್ತು, ಆದರೆ ಈಗಿರುವ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಈ ಮಾತನ್ನು ಉಳಿಸಿಕೊಳ್ಳುವುದರಲ್ಲಿ ವಿಫಲವಾಗಿದೆ.

ಬಿಎಂಟಿಸಿ ಬಸ್‌ಪಾಸ್‌ ಅಂಚೆ ಮೂಲಕ ನೇರವಾಗಿ ವಿದ್ಯಾರ್ಥಿಗಳ ಮನೆಗೆಬಿಎಂಟಿಸಿ ಬಸ್‌ಪಾಸ್‌ ಅಂಚೆ ಮೂಲಕ ನೇರವಾಗಿ ವಿದ್ಯಾರ್ಥಿಗಳ ಮನೆಗೆ

ಈ ಸರ್ಕಾರ ಕೂಡ ಮೊದಲು ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ಗಳನ್ನು ನೀಡುವುದಾಗಿ ತಿಳಿಸಿತ್ತು. ನಂತರದಲ್ಲಿ ಕೇವಲ ಎಸ್‌ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಪಾಸ್‌ ನೀಡುವುದಾಗಿ ತಿಳಿಸಿತ್ತು.

CM to face agitation by students for free bus pass

ಸರ್ಕಾರ ವಿದ್ಯಾರ್ಥಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶಗೊಂಡು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಜುಲೈ 21ರಂದು ಸ್ವಯಂಪ್ರೇರಿತ ಶಾಲಾ-ಕಾಲೇಜು ಬಂದ್‍ಗೆ ಕರೆ ನೀಡಿವೆ. ಜೊತೆಗೆ ಎರಡು ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ಬಂದ್ ಗೆ ಕರೆ ನೀಡಿವೆ.

ಈ ಹಿಂದೆ ಬಜೆಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡುವುದಾಗಿ ಹೇಳಿದ್ದರು. ಈ ಕುರಿತು ಬಜೆಟ್ ಸದನದಲ್ಲಿ ಒಪ್ಪಿಗೆಯೂ ಸೂಚಿಸಿತ್ತು. ಆದರೆ ಈಗ ಸಾರಿಗೆ ಇಲಾಖೆಗೆ ಆರ್ಥಿಕ ನಷ್ಟವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಉಚಿತ್ ಬಸ್ ಪಾಸನ್ನು ಕೊಡುವುದಿಲ್ಲ ಎಂದು ಡಿ.ಸಿ. ತಮ್ಮಣ್ಣ ಸ್ಪಷ್ಟನೆ ನೀಡಿದ್ದರು. ಇವರ ನಿರ್ಧಾರದಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡು ಬಂಸ್ ಗೆ ಕರೆ ಕೊಟ್ಟಿದ್ದಾರೆ.

ಮೊದಲನೆಯದು ಕೊಟ್ಟ ಮಾತಿನಂತೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಎರಡನೆಯದು ಈಗಾಗಲೇ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣ ಹಿಂತಿರುಗಿಸಬೇಕು. ಈ ಎರಡು ಬೇಡಿಕೆಯನ್ನು ಈಡೇರಿಸುವಂತೆ ವಿದ್ಯಾರ್ಥಿಗಳು ಸರ್ಕಾರಕ್ಕೆ ಒತ್ತಾಯ ಮಾಡಲಿದ್ದಾರೆ.

English summary
Chief minister H.D. Kumaraswamy should face agitation of students since the government has not ensured free bus pass for students belongs to all communities. Students have decided to protest against the government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X