ಜೆಡಿಎಸ್ ಒಡೆಯಲು ಸಿದ್ದರಾಮಯ್ಯ ತಂತ್ರ: ಎಚ್ ಡಿಕೆ ಆರೋಪ
ಜೆಡಿಎಸ್ ಒಡೆಯುವ ಹುನ್ನಾರ ಮುಖ್ಯಮಂತ್ರಿಗಳ ಕಚೇರಿಯಲ್ಲೇ ಪ್ಲಾಂಟ್ ಆಗಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.
ದೇವದುರ್ಗ (ರಾಯಚೂರು), ಮೇ 4: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷವನ್ನು ಒಡೆಯುವ ಕುತಂತ್ರ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ ಆರೋಪಿಸಿದ್ದಾರೆ.
ದೇವದುರ್ಗದ ಅರಕೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಜೆಡಿಎಸ್ ಪಕ್ಷವನ್ನು ಒಡೆಯುವ ಹುನ್ನಾರ ಮುಖ್ಯಮಂತ್ರಿಗಳ ಕಚೇರಿಯಲ್ಲೇ ಪ್ಲಾಂಟ್ ಆಗಿದೆ. ಹಾಗಾಗಿ, ಜೆಡಿಎಸ್ ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸುಂಥ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಇದೇ ವೇಳೆ, ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಒಡೆಯುವುದಿಲ್ಲ ಎಂದು ಅವರು ಪುನರುಚ್ಛರಿಸಿದರು.











Click it and Unblock the Notifications