ರಾಜ್ಯದಲ್ಲಿ ಕಲ್ಲಿದ್ದಲು ಖಾಲಿ: ಕೇಂದ್ರ ಮಧ್ಯಪ್ರವೇಶಕ್ಕೆ ಎಚ್ಡಿಕೆ ಆಗ್ರಹ

ಬೆಂಗಳೂರು, ಅಕ್ಟೋಬರ್ 17: ರಾಜ್ಯದಲ್ಲಿ ಕಲ್ಲಿದ್ದಲಿಗೆ ಭೀಕರ ಬರ ಎದುರಾಗಿದೆ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಲಾಗಿದೆ ಎಂದು ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಉಂಟಾಗಿದೆ. 1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ. ಈ ಸ್ಥಿತಿಗೆ ಕಾರಣ, ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ಸ್ (WLC) ರವರು ಕಲ್ಲಿದ್ದಲು ಪೂರೈಕೆ ಒಪ್ಪಂದದ ಪ್ರಕಾರ ನೀಡ ಬೇಕಾಗಿದ್ದ ಕಲ್ಲಿದ್ದಲಿನ ಒಟ್ಟು ಪ್ರಮಾಣದಲ್ಲಿ ಸುಮಾರು 6 ಲಕ್ಷ ಟನ್ ಗಳಷ್ಟು ಕಲ್ಲಿದ್ದಲನ್ನು ಈವರೆಗೆ ಪೂರೈಕೆ ಮಾಡದಿರುವುದು ಎಂದು ತಿಳಿಸಿದ್ದಾರೆ.

ಈ ಪ್ರಮಾಣದ ಕೊರತೆಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರ ಪೂರೈಕೆ ಮಾಡಬೇಕೆಂದು ಕೇಂದ್ರ ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯಲ್ ರವರನ್ನು ಪತ್ರ ಮುಖೇನ ವಿನಂತಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

CM Urges Union Minister Piyush Goyal to Ensure Coal Supply to the state

ಮುಂದಿನ ದಿನಗಳಲ್ಲಿ ಮೆ:WCL ನಿಂದ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡುವುದರೊಂದಿಗೆ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಹಕರಿಸುವಂತೆ ಕೋರಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+