ಸಿಎಂ,ಡಿಸಿಎಂ ನಡುವೆ ಮುಂದುವರೆದ ಕೋಲ್ಡ್ ವಾರ್? ಸಿದ್ದು ವಿರುದ್ದ ಖರ್ಗೆಗೆ ದೂರು ಕೊಟ್ರಾ ಡಿಕೆಶಿ!? ಕಾರಣವೇನು?
ಬೆಂಗಳೂರು, ಜೂನ್ 26: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರವಾಗಿ ಕಳೆದ ಎರಡು ವರ್ಷಗಳಿಂದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎನ್ನಲಾಗಿದ್ದು, ಇದೀಗ ಸರ್ಕಾರ ರಚನೆಯ ನಂತರ ಸಿಎಂ ಹಾಗೂ ಡಿಸಿಎಂ ನಡುವೆ ತೆರೆಮರೆಯಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನಲಾಗಿದೆ.
ಹೌದು, ಸರ್ಕಾರ ರಚನೆಯಾಗಿ ಒಂದು ತಿಂಗಳಾಗಿದ್ದು, ಕಾಂಗ್ರೆಸ್ ನಲ್ಲಿ ಪೂರ್ಣವಾದಿ ಸಿಎಂ ವಿಚಾರ ಚರ್ಚೆಯಾಗುತ್ತಿದೆ. ಇತ್ತ ಬಿಜೆಪಿ ನಾಯಕರು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷ ಪೂರೈಕೆ ಮಾಡಲ್ಲ ಎಂದು ಟೀಕೆ ಮಾಡುತ್ತಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬೆಂಬಲಿಗರು ಸಹ ಪೂರ್ಣಾವಧಿ ಸಿಎಂ ವಿಚಾರ ಚರ್ಚೆ ನಡೆಸುತ್ತಿದೆ. ಪಕ್ಷದಲ್ಲಿ ಹಲವು ಗೊಂದಲಗಳಿಗೆ ಕಾರಣವಾಗುತ್ತಿದೆ ಎನ್ನಲಾಗಿದೆ.

ಇನ್ನೂ ಈ ಎಲ್ಲಾ ಬೆಳವಣಿಗೆಗಳ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆ ಎಂಬ ಮಾತು ಕೆಪಿಸಿಸಿ ಪಾಳಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇತ್ತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ನಡುವೆ ಮೊದಲಿನಿಂದಲೂ ಸರಿ ಇಲ್ಲ ಎಂಬ ಮಾತು ಕೇಳಿ ಬರುತ್ತಿತ್ತು.
ಮೊದಲಿನಿಂದಲೂ ಇಬ್ಬರು ನಾಯಕರ ನಡುವೆ ಜಟಾಪಟಿ ಶುರುವಾಗಿದ್ದು, ಇದು ಸರ್ಕಾರ ರಚನೆಯಾದ ಬಳಿಕವೂ ಇಬ್ಬರ ನಡುವಿನ ಕೋಲ್ಡ್ವಾರ್ ಮುಂದುವರೆದಿದೆ ಎನ್ನಲಾಗಿದೆ. ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಭೇಟಿಯಾಗಿ, ಮಲ್ಲಿಕಾರ್ಜುನ್ ಖರ್ಗೆ ಕಾರಿನಲ್ಲೇ ಪ್ರಯಾಣಿಸಿ ಸುಮಾರು ಒಂದೂವರೆ ಗಂಟೆಗಿಂತಲೂ ಹೆಚ್ಚಿನ ಸಮಯ ಚರ್ಚೆ ನಡೆಸಿದ್ದಾರ ಎಂದು ಹೇಳಲಾಗಿದೆ.
ಸರ್ಕಾರ ರಚನೆಯಾದ ಬಳಿಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳು, ವಿಧಾನಸಭಾ ಸಚಿವಾಲಯ ಸೇರಿದಂತೆ ಆಯಾ ಇಲಾಖೆಗಳ ಆಯಾಕೊಟ್ಟಿನ ಸ್ಥಾನಗಳಲ್ಲಿ ತಮ್ಮದೇ ಬೆಂಬಲಿಗರಿಗೆ ಪೋಸ್ಟಿಂಗ್ ನೀಡುತ್ತಿದ್ದಾರೆ, ಹಾಗೂ ವಿವಿಧ ಸಚಿವಾಲಯಗಳಿಗೆ ಗುತ್ತಿಗೆ ನೌಕರರ ನೇಮಕಾತಿಯಲ್ಲಿ ಸಿಎಂ ಮೈಸೂರಿನವರಿಗೆ ಹೆಚ್ಚಿನ ಆದ್ಯತೆ ಕೊಡ್ತಿದ್ದಾರಂತೆ ಎಂದು ಡಿಕೆ ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಈ ಕಾರಣಗಳನ್ನ ಮಲ್ಲಿಕಾರ್ಜುನ್ ಖರ್ಗೆ ಅವರ ಬಳಿ ಡಿ ಕೆ ಶಿವಕುಮಾರ್ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications