ನಮ್ಮ ಸಿಎಂ ತುಂಬಾ ಬ್ಯೂಸಿ, ‌ಫೋನ್​​ಗೂ ಸಿಗಲ್ಲ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಮುಖ್ಯಮಂತ್ರಿಗಳು ಪ್ರತಿದಿನ ಸುಮಾರು 18 ಗಂಟೆಗಳ ಕಾಲ ಕೆಲಸ ಮಾಡುತ್ತಿರುವುದರಿಂದ ಅವರನ್ನು ಫೋನ್‌ನಲ್ಲಿ ಸಂಪರ್ಕಿಸುವುದು ಕೆಲವೊಮ್ಮೆ ಕಷ್ಟವಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಬಿಡುವಿಲ್ಲದ ಕಾರ್ಯವೈಖರಿಯಿಂದಾಗಿ ಕೆಲವು ವಿಚಾರಗಳಲ್ಲಿ ಸಮಯದ ವ್ಯತ್ಯಾಸ ಉಂಟಾಗಬಹುದು ಎಂದು ತಿಳಿಸಿದ್ದಾರೆ.

CM Works 18 Hours a Day Difficult to Reach by Phone Lakshmi Hebbalkar on Gruha Lakshmi Payment Delay

ಗೃಹಲಕ್ಷ್ಮಿ ಯೋಜನೆಗೆ ಹಣ ಬಿಡುಗಡೆ ಸಂಬಂಧ ತಾವು ಹಿಂದೆ ಹಣಕಾಸು ಇಲಾಖೆಯ ಕಾರ್ಯದರ್ಶಿ ರಿತೇಶ್ ಅವರಿಗೆ ಹಲವು ಬಾರಿ ಕರೆ ಮಾಡಿ ವಿಷಯದ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡುತ್ತಿದ್ದೆ. ಇದೀಗ ತಮ್ಮ ಇಲಾಖೆಯ ಕಾರ್ಯದರ್ಶಿಗಳೂ ಇದೇ ರೀತಿಯಲ್ಲಿ ಯೋಜನೆಯ ಅನುಷ್ಠಾನ ಮತ್ತು ಹಣ ಬಿಡುಗಡೆ ವಿಚಾರದಲ್ಲಿ ಗಮನ ಹರಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಶೀಘ್ರದಲ್ಲೇ ಸಂಪುಟದಲ್ಲಿ ಮಹಿಳಾ ಸಚಿವೆ

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಸಚಿವರ ಸೇರ್ಪಡೆ ವಿಳಂಬವಾಗುತ್ತಿರುವ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಅತ್ಯಂತ ಶೀಘ್ರದಲ್ಲೇ ಕರ್ನಾಟಕ ಸರ್ಕಾರದ ಸಂಪುಟದಲ್ಲಿ ಮಹಿಳಾ ಸಚಿವರನ್ನು ನೋಡುತ್ತೀರಿ ಎಂದು ಹೇಳಿದರು. ತಾವು ಸಚಿವರಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಮಾತ್ರ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನಾನು ಒಂದು ಪ್ರಶ್ನೆಗೆ ಉತ್ತರ ಕೊಡುತ್ತೇನೆ, ಇನ್ನೊಂದಕ್ಕೆ ಉತ್ತರ ಕೊಡುವುದಿಲ್ಲ. ರಾಜಕಾರಣದಲ್ಲಿ ಕಾಲ ಒಂದೇ ರೀತಿ ಇರುವುದಿಲ್ಲ. ಅಧಿಕಾರ ಶಾಶ್ವತವಲ್ಲ. ಅಧಿಕಾರ ಇದ್ದಾಗ ಜನರು ನೆನಪಿಸಿಕೊಳ್ಳುವಂತಹ ಕೆಲಸ ಮಾಡಿದ್ದೇನೆ ಎಂದರು.

ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕ್ಷೇತ್ರದ 36 ದೇವಸ್ಥಾನಗಳಿಗೆ ಬಾಕಿ ಇರುವ ಮೂರನೇ ಹಾಗೂ ಅಂತಿಮ ಕಂತಿನ ಅನುದಾನ ಬಿಡುಗಡೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿಗಳ ಪ್ರತಿನಿಧಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಗುತ್ತಿದೆ. ಕಳೆದ 7 ವರ್ಷಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ 156ಕ್ಕೂ ಅಧಿಕ ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು ₹150 ಕೋಟಿಗೂ ಹೆಚ್ಚು ಅನುದಾನ ದೊರಕಿಸಲಾಗಿದೆ. ₹10 ಲಕ್ಷದಿಂದ ₹5 ಕೋಟಿವರೆಗೆ ವಿವಿಧ ದೇವಸ್ಥಾನಗಳಿಗೆ ಅನುದಾನ ನೀಡಲಾಗಿದೆ ಎಂದು ಹೇಳಿದರು.‌

ಒಂದು ಊರಿನಲ್ಲಿ ಎರಡು-ಮೂರು ದೇವಸ್ಥಾನಗಳಿರುವುದು ಸಾಮಾನ್ಯ. ಅವು ವಿವಿಧ ಸಮುದಾಯಗಳ ಆರಾಧನಾ ಕೇಂದ್ರಗಳಾಗಿವೆ. ದೇವಸ್ಥಾನ ಎಂದರೆ ಕೇವಲ ಕಟ್ಟಡವಲ್ಲ; ಅದು ನಮ್ಮ ನಂಬಿಕೆ, ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ. ಎಲ್ಲ ಸಮುದಾಯಗಳ ಆರಾಧನಾ ಕೇಂದ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ" ಎಂದು ಹೆಬ್ಬಾಳಕರ್ ಹೇಳಿದರು.

ಮುಜರಾಯಿ ಇಲಾಖೆಯೊಂದರ ಅನುದಾನಕ್ಕೆ ಸೀಮಿತವಾಗದೆ ನೀರಾವರಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಮೂಲಕವೂ ಅನುದಾನ ತಂದು ದೇವಸ್ಥಾನಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ತಿಳಿಸಿದರು.

253 ಶಾಲಾ ಕೊಠಡಿಗಳ ನಿರ್ಮಾಣ

ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದುವರೆಗೆ 253 ಸರ್ಕಾರಿ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಐದು ಕಡೆ ಹೊಸ ಶಾಲಾ ಕಟ್ಟಡಗಳ ನಿರ್ಮಾಣ, ನಾಲ್ಕು ಕೆಪಿಎಸ್ ಶಾಲೆಗಳ ಮಂಜೂರು ಸೇರಿದಂತೆ ಹಲವು ಕಾಮಗಾರಿಗಳು ನಡೆದಿವೆ ಎಂದು ಹೆಬ್ಬಾಳಕರ್ ಹೇಳಿದರು.

ತುಮ್ಮರಗುದ್ದಿ ಹಾಗೂ ಹಿರೇಬಾಗೇವಾಡಿಯಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಕ್ಷೇತ್ರದಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಶಾಲೆ, ಸಿಬಿಎಸ್‌ಇ ಮಾದರಿಯ ಶಾಲೆ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳನ್ನು ಕ್ಷೇತ್ರಕ್ಕೆ ತರಲಾಗಿದೆ. ಪದವಿ ಕಾಲೇಜು ಇಲ್ಲದ ಕ್ಷೇತ್ರಕ್ಕೆ ಇದೀಗ ಪದವಿ ಕಾಲೇಜು ಮಂಜೂರಾಗಿದ್ದು, ಮಣ್ಣೂರಿನಲ್ಲಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜು ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಶಾಲೆ ಮತ್ತು ಆರೋಗ್ಯ ಕ್ಷೇತ್ರದ ಕಡೆ ಇನ್ನಷ್ಟು ಗಮನ ಹರಿಸಲಾಗುವುದು. ಕ್ಷೇತ್ರದ ಜನರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ದೊರಕಬೇಕು ಎಂಬುದು ನನ್ನ ಆಶಯ ಎಂದು ಅವರು ಹೇಳಿದರು.

ಕೆರೆಗಳಿಗೆ ನೀರು ತುಂಬಿಸುವ ಯೋಜನೆ

ಬರ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗುವ ಉದ್ದೇಶದಿಂದ ಕ್ಷೇತ್ರದ ನೂರಕ್ಕೂ ಅಧಿಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ಸರ್ಕಾರದಿಂದ ದೊಡ್ಡ ಪ್ರಮಾಣದ ಅನುದಾನ ತರಲಾಗಿದೆ. ವಿವಿಧ ಮೂಲಗಳಿಂದ ಸುಮಾರು ₹1,000 ಕೋಟಿ ಅನುದಾನವನ್ನು ಈ ಸಂಬಂಧ ಒದಗಿಸಲಾಗಿದೆ ಎಂದು ಹೆಬ್ಬಾಳಕರ್ ತಿಳಿಸಿದರು. ರಾಜಹಂಸಗಡ ಕೋಟೆ ಅಭಿವೃದ್ಧಿಗೂ ಮತ್ತೆ ಅನುದಾನ ತರಲಾಗುತ್ತಿದೆ. ಹಲವು ಗ್ರಾಮಗಳಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ಗಳು ಸೇರಿದಂತೆ ನೀರಾವರಿ ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ರಸ್ತೆ, ಚರಂಡಿ, ಕುಡಿಯುವ ನೀರು, ಶಾಲೆ, ಆಟದ ಮೈದಾನ, ಕೆರೆ, ದೇವಸ್ಥಾನ-ಜನರ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿಯ ಭಾಗ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧಳಾಗಿದ್ದೇನೆ ಎಂದು ಅವರು ಹೇಳಿದರು.

ಸರ್ಕಾರದ ಹಣ ಜನರ ತೆರಿಗೆ ಹಣ. ಆದರೆ ಸರ್ಕಾರದಿಂದ ಅನುದಾನ ತರುವುದು ಅಷ್ಟು ಸರಳವಲ್ಲ. ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸಿ ಸಾಧ್ಯವಾದಷ್ಟು ಅನುದಾನ ತರುವ ಕೆಲಸ ಮಾಡುತ್ತಿದ್ದೇನೆ. ಮಾತುಕೊಟ್ಟ ಮೇಲೆ ಅದು ಈಡೇರುವವರೆಗೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಹೆಬ್ಬಾಳಕರ್ ಹೇಳಿದರು.

ಮುಂದಿನ ದಿನಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪಿಕೆಪಿಎಸ್) ಕಟ್ಟಡ ನಿರ್ಮಾಣಕ್ಕೂ ₹25 ಲಕ್ಷದಿಂದ ₹50 ಲಕ್ಷದವರೆಗೆ ಅನುದಾನ ತರಲು ಪ್ರಯತ್ನಿಸಲಾಗುವುದು. ಪ್ರತಿ ಗ್ರಾಮದಲ್ಲಿಯೂ ವಿವಿಧ ಇಲಾಖೆಗಳ ಮೂಲಕ ಕೋಟಿ ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+