ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಸುವರ್ಣಸೌಧ ಕೇವಲ ಪ್ರತಿಷ್ಠೆಗೆ ಮಾತ್ರವಲ್ಲ; ಕಚೇರಿ ಸ್ಥಳಾಂತರಿಸಿ!

|
Google Oneindia Kannada News

ಬೆಂಗಳೂರು, ಜೂ. 03: ಮಹಾರಾಷ್ಟ್ರದ ಗಡಿ ಖ್ಯಾತೆಗೆ ತಿರುಗೇಟು ಕೊಡುವ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ಸುವರ್ಣಸೌಧ ಕೇವಲ ಪ್ರತಿಷ್ಠೆಗೆ ಮಾತ್ರ ಎಂಬಂತಾಗಿದೆ. ಹಿಂದೆ ಮೈತ್ರಿ ಸರ್ಕಾರದ ಆಡಳಿತದಲ್ಲಿ ಸುವರ್ಣಸೌಧದಲ್ಲಿನ ಹಲವು ಕಚೇರಿಗಳನ್ನು ದಕ್ಷಿಣ ಕರ್ನಾಟಕಕ್ಕೆ ಸ್ಥಳಾಂತರ ಮಾಡಿದ್ದರಿಂದ ವಿವಾದ ಉಂಟಾಗಿತ್ತು.

ಜಲಸಂಪನ್ಮೂಲ, ಸಕ್ಕರೆ ಸೇರಿದಂತೆ ಹಲವು ಕಚೇರಿಗಳನ್ನು ಬೆಳಗಾವಿ ಸುವರ್ಣಸೌಧಕ್ಕೆ ಸ್ಥಳಾಂತರಿಸಲು ಉತ್ತರ ಕರ್ನಾಟಕ ಭಾಗದ ಜನರ ಒತ್ತಾಯ ಯಾವಾಗಲೂ ಇದೆ. ಇದೀಗ ಜನರ ಬೇಡಿಕೆ ಹೊರತಾಗಿಯೂ ಸ್ಥಳಾಂತರವಾಗದ ಕಚೇರಿಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಲೋಕಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪರಿಶೀಲನಾ ಸಭೆ ಸಂದರ್ಭ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಲಾಖಾ ಮುಖ್ಯಸ್ಥರಿಗೆ ಹಾಗೂ ಸಂಬಂಧಿಸಿದ ಸಚಿವರಿಗೆ ಸೂಚಿಸಿದ್ದಾರೆ.

ನಾನೇ ಪರಿಶೀಲನೆ ಮಾಡ್ತೇನೆ

ನಾನೇ ಪರಿಶೀಲನೆ ಮಾಡ್ತೇನೆ

ಬೆಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ತೆರಳದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೆ ಎಚ್ಚರಿಕೆ ಕೊಟ್ಟಿದ್ದಾರೆ. ಮುಂದಿನ ಸಭೆಯೊಳಗೆ ಜಲಸಂಪನ್ಮೂಲ, ಲೋಕೋಪಯೋಗಿ, ಸಕ್ಕರೆ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳನ್ನು ಬೆಳಗಾವಿ ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಬೇಕು. ಸ್ಥಳಾಂತರ ಮಾಡಿದ ಕಚೇರಿಗಳನ್ನು ನಾನೇ ಖುದ್ದಾಗಿ ಪರಿಶೀಲನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ಕೋವಿಡ್-19 : ಏಳು ಜಿಲ್ಲಾಡಳಿತಗಳೊಂದಿಗೆ ಸಿಎಂ ವಿಡಿಯೋ ಸಂವಾದಕೋವಿಡ್-19 : ಏಳು ಜಿಲ್ಲಾಡಳಿತಗಳೊಂದಿಗೆ ಸಿಎಂ ವಿಡಿಯೋ ಸಂವಾದ

ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಎಚ್ಚರಿಕೆ ಕೊಟ್ಟಿರುವ ಯಡಿಯೂರಪ್ಪ ಅವರು, ರಾಜ್ಯ ಮಟ್ಟದ ಹಲವು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸಿ ಎಂದಿದ್ದಾರೆ. ಮುಂದಿನ ಸಭೆಯೊಳಗೆ ಹಲವಾರು ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ಖುದ್ದಾಗಿ ಪರಿಶೀಲಿಸುವುದಾಗಿ ಅವರು ಹೇಳಿದ್ದಾರೆ.

ರಸ್ತೆ ಸರಿ ಮಾಡಿ

ರಸ್ತೆ ಸರಿ ಮಾಡಿ

ಕಳೆದ ವರ್ಷ ಪ್ರವಾಹದಿಂದ ಹಾಳಾಗಿರುವ ರಸ್ತೆ ಹಾಗೂ ಸೇತುವೆಗಳ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ. ರಾಜ್ಯದಲ್ಲಿ ಪ್ರವಾಹ ಕಾಮಗಾರಿಗಳನ್ನು 500 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದ್ದು, ಪ್ರವಾಹದಿಂದ ಹಾಳಾಗಿರುವ 1800 ರಸ್ತೆ ಕಾಮಗಾರಿಗಳ ಪೈಕಿ 1700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ ಹಾಗೂ ದುರಸ್ಥಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ಕೊಟ್ಟಿದ್ದಾರೆ.

ಟ್ರೈನಿ ಇಂಜಿನಿಯರ್‍ಗಳ ನೇಮಕ

ಟ್ರೈನಿ ಇಂಜಿನಿಯರ್‍ಗಳ ನೇಮಕ

ಇಂಜಿನಿಯರ್‍ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಇಂಜಿನಿಯರ್‍ಗಳನ್ನು ಟ್ರೈನಿಗಳೆಂದು ನೇಮಕ ಮಾಡಲು ಸಿಎಂ ಬಿಎಸ್‌ವೈ ಆದೇಶ ಮಾಡಿದ್ದಾರೆ.

ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಿಎಂ ಸೂಚಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಜಮೀನನ್ನು ಈಗಾಗಲೇ ಗುರುತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು, ರಾಜ್ಯದ 1650 ಕಿ.ಮೀ ಉದ್ದದ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಹಾಗೂ 10,110 ಕಿ.ಮೀ ಜಿಲ್ಲಾ ಮುಖ್ಯ ರಸ್ತೆಯನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ತೆರೆಯ ಮೇಲಿನ ಸಿಎಂ ಬಿಎಸ್ವೈ, ತೆರೆಯ ಹಿಂದಿನ ಮುಖ್ಯಮಂತ್ರಿ ಯಾರು?ತೆರೆಯ ಮೇಲಿನ ಸಿಎಂ ಬಿಎಸ್ವೈ, ತೆರೆಯ ಹಿಂದಿನ ಮುಖ್ಯಮಂತ್ರಿ ಯಾರು?

ಕೆರೆ, ಹಳ್ಳ ಹಾಗೂ ನದಿಪಾತ್ರದ ಮಣ್ಣನ್ನು ರಸ್ತೆ ಕಾಮಾಗಾರಿಗಳೀಗೆ ಉಪಯೋಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಏಕರೂಪ ದರಪಟ್ಟಿ

ಏಕರೂಪ ದರಪಟ್ಟಿ

ವಿವಿಧ ಇಂಜಿನಿಯರಿಂಗ್ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯಾದ್ಯಾಂತ ಏಕರೂಪ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ. ಏಕರೂಪ ದರಪಟ್ಟಿ ಹೊರಬಂದಲ್ಲಿ ಇಲಾಖೆಗೆ ನೂರಾರು ಕೋಟಿ ರೂ.ಗಳನ್ನು ಸರ್ಕಾರಕ್ಕೆ ಉಳಿಸಬಹುದಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 4813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು 30675 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಂತರ್ಜಲ ವೃದ್ಧಿ ಹಾಗೂ ಜಾನುವಾರುಗಳಿಗೆ ಕುಡಿ

English summary
CM Yeddyurappa has ordered the relocation of government offices from Bengaluru to Belagavi Suvarnasoudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X