ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಸ್ಪೋಟ ಪ್ರಕರಣ: ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ ಸಿಎಂ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಜ. 22: ಶಿವಮೊಗ್ಗದ ಸಮೀಪ ನಡೆದ ಸ್ಪೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಯಡಿಯೂರಪ್ಪ ಅವರು ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

Recommended Video

ಶಿವಮೊಗ್ಗದಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು ಹೇಗೆ? | Oneindia Kannada

ಈ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಕಲ್ಲು ಕ್ವಾರಿ ಸ್ಪೋಟ ಪ್ರಕರಣದ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ಕೊಟ್ಟಿದ್ದಾರೆ. ಕಳೆದ ರಾತ್ರಿ ಶಿವಮೊಗ್ಗ ಸಮೀಪ ಹುಣಸೋಡು ಗ್ರಾಮದಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಸ್ಪೋಟ ಸಂಭವಿಸಿದೆ. ದುರ್ಘಟನೆಯಲ್ಲಿ ಐದು ಜನರು ಮೃತರಾಗಿದ್ದಾರೆ. ನಮ್ಮ ಲೋಕಸಭಾ ಸದಸ್ಯ ರಾಘವೇಂದ್ರ ಘಟನಾ ಸ್ಥಳದಲ್ಲಿದ್ದು, ಎಲ್ಲವನ್ನು ವಿಚಾರಿಸುತ್ತಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಕೂಡ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರೆ.

CM Yediyurappa Announces Rs 5 Lakh Compensation to Families of Shivamogga Blast Victims


ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ: ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ದಳವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ತನಿಖೆಯ ಬಳಿಕ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
CM Yediyurappa Announces Rs 5 Lakh Compensation to Families of Shivamogga Blast Victims

ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೇವೆ. ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಎಲ್ಲೆಲ್ಲಿ ಈ ರೀತಿಯ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆಯೋ ತಡೆಯಲು ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ, ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ಈಗಾಗಲೇ ಹಲವೆಡೆ ಕಡೆ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ. ತನಿಖೆಯಾಗಿ ವರದಿ ಬರಲಿ ನಂತರ ತಪ್ಪಿತಸ್ಥರು ಯಾರಾದರೇನು? ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಕ್ಯಾರಿ ಲೀಸ್ ಪಡೆದಿದ್ದ ಸುಧಾಕರ್ ಎಂಬುವರು ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದರು. ಜೊತೆಗೆ ನಾಳೆ ಅಂದರೆ ಜನವರಿ 23 ರಂದು ನಾಳೆ ಶಿವಮೊಗ್ಗಕ್ಕೆ ತೆರಳುತ್ತಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

English summary
Chief Minister B.S. Yediyurappa Announces Rs 5 Lakh Compensation to Families of Shivamogga Blast Victims. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X