ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರಿಗೆ ಮುಷ್ಕರ; ನೌಕರರಿಗೆ ಮತ್ತೊಂದು ಕರೆ ಕೊಟ್ಟ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಏಪ್ರಿಲ್ 9; "6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವೇ ಇಲ್ಲ. ಸಾಧ್ಯವೇ ಇಲ್ಲ ಎಂದು ಹೇಳಿದ ಮೇಲೂ ಹಠ ಮಾಡುವುದು ಸರಿಯಲ್ಲ. ಅರ್ಥ ಮಾಡಿಕೊಂಡು ಕೆಲಸಕ್ಕೆ ಬನ್ನಿ, ಮುಷ್ಕರ ಕೈಬಿಡಿ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಾರಿಗೆ ನೌಕರರಿಗೆ ಕರೆ ನೀಡಿದರು.

ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜೊತೆ ಮುಖ್ಯಮಂತ್ರಿಗಳು ಮಾತನಾಡಿದರು. "ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಮುಷ್ಕರವನ್ನು ಕೈಬಿಡುವಂತೆ" ಮನವಿ ಮಾಡಿದರು.

ಸಾರಿಗೆ ಮುಷ್ಕರ; ಜನರ ತೊಂದರೆ ನಿವಾರಿಸಲು ಮೂರು ಕ್ರಮ ಸಾರಿಗೆ ಮುಷ್ಕರ; ಜನರ ತೊಂದರೆ ನಿವಾರಿಸಲು ಮೂರು ಕ್ರಮ

"ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ. ಇವತ್ತಿನಿಂದ ನಿಮ್ಮ ಬಸ್‌ಗಳನ್ನು ಓಡಿಸುವುದಕ್ಕೆ ಆರಂಭ ಮಾಡಿ. ಕೋವಿಡ್ ಕಾರಣದಿಂದಾಗಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಠ ಮಾಡುವುದು ಎಷ್ಟರ ಮಟ್ಟಿಗೆ ಸರಿ, ನೀವೇ ಯೋಚನೆ ಮಾಡಿ, ಕೆಲಸಕ್ಕೆ ಬನ್ನಿ ಎಂದು ಮತ್ತೊಮ್ಮೆ ಮನವಿ ಮಾಡುತ್ತೇನೆ" ಎಂದು ಹೇಳಿದರು.

ಮುಷ್ಕರ; ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ ಮುಷ್ಕರ; ಮೈಸೂರಿನಿಂದ ಹೊರಡುವ ವಿಶೇಷ ರೈಲು ವೇಳಾಪಟ್ಟಿ

CM Yediyurappa Appeals Transport Workers To End Strike

"ಆದಾಯದಲ್ಲಿ ಶೇ 85ರಷ್ಟು ಭಾಗ ಸರ್ಕಾರಿ ನೌರರ ವೇತನ, ಪಿಂಚಣಿ ಸೇರಿದಂತೆ ಇತರ ಯೋಜನೇತರ ವೆಚ್ಚಗಳಿಗೆ ಖರ್ಚಾಗುತ್ತದೆ. ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಹಠ ಮಾಡಬಾರದು, ಈಗಾಗಲೇ 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ" ಎಂದು ತಿಳಿಸಿದರು.

ಸಾರಿಗೆ ನೌಕರರ ಮುಷ್ಕರ; ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿದ ಸರ್ಕಾರ ಸಾರಿಗೆ ನೌಕರರ ಮುಷ್ಕರ; ಖಾಸಗಿ ಬಸ್‌ಗಳಿಗೆ ದರ ನಿಗದಿ ಮಾಡಿದ ಸರ್ಕಾರ

ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಹ ನೌಕರರು ಮುಷ್ಕರವನ್ನು ನಿಲ್ಲಿಸಿ ಕೆಲಸಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದ್ದಾರೆ.

Recommended Video

ಬಸ್‌ ಸಂಚಾರ ಬಂದ್‌ ಹಿನ್ನೆಲೆ 10ಲಕ್ಷ ಪರಿಹಾರ ಕೋರಿ ಕೋಡಿಹಳ್ಳಿ ಚಂದ್ರಶೇಖರ್‌ಗೆ ನೊಟೀಸ್‌ ನೀಡಿದ ವಿದ್ಯಾರ್ಥಿನಿ | Oneindia Kannada

ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಜನರಿಗೆ ತೊಂದರೆ ಆಗಬಾರದೆಂದು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನೆರೆ ರಾಜ್ಯಗಳಿಗೆ ಸಹ ಹೆಚ್ಚುವರಿ ಬಸ್‌ಗಳನ್ನು ಓಡಿಸಲಾಗುತ್ತಿದ್ದು, ರೈಲು ಸಂಚಾರ, ಮೆಟ್ರೋ ರೈಲಿನ ಸಂಚಾರವನ್ನು ಹೆಚ್ಚಿಸಲಾಗಿದೆ.

English summary
Transport employees strike entered 3rd day in Karnataka. Chief minister B. S. Yediyurappa appealed the workers to call off their strike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X