ಕೊರೊನಾ ವೈರಸ್ ಮುಂಜಾಗ್ರತೆ, ರಾಜ್ಯ ಪ್ರವಾಸ ರದ್ದು ಮಾಡಿದ ಸಿಎಂ ಯಡಿಯೂರಪ್ಪ!

ಬೆಂಗಳೂರು, ಮಾ. 14: ಕೊರೋನಾ ವೈರಸ್‌ಗೆ ಮುಂಜಾಗ್ರತೆ ವಹಿಸಲು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದರು, ಅದರಂತೆಯೆ ತಮ್ಮ ರಾಜ್ಯ ಪ್ರವಾಸವನ್ನು ಅವರು ರದ್ದು ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಜೊತೆಗೆ ಅವರ ಸಂಪುಟದ ಇತರ ಸಹೋದ್ಯೋಗಿಗಳು ಕೂಡ ತಮ್ಮ ಇತರ ಜಿಲ್ಲೆಗಳ ತಮ್ಮ ಪ್ರವಾಸವನ್ನು ರದ್ದು ಮಾಡಿದ್ದಾರೆ.

ಮಾರ್ಚ್ 15 ಹಾಗೂ 16 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎರಡು ದಿನಗಳ ಕಾಲ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಕೊಟ್ಟಿರುವ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿ ಬಿ.ಪಿ. ಚನ್ನಬಸವೇಶ ಅವರು ಮುಂಜಾಗ್ರತೆ ಕ್ರಮವಾಗಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ ರದ್ದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚನ್ನಬಸವೇಶ ಅವರ ಪ್ರಕಟಣೆ ಹೀಗಿದೆ.

CM Yediyurappa Canceled his District Tour due to Coronavirus

ಕೊರೊನಾ ಬಗ್ಗೆ ಯಡಿಯೂರಪ್ಪ ತುರ್ತು ಸಭೆ; 18 ಅಂಶಗಳು

ಮುಖ್ಯಮಂತ್ರಿಗಳ ಪ್ರವಾಸ ರದ್ದಾಗ ಬಗ್ಗೆ ಮಾಹಿತಿ: ಕೋವಿಡ್-19(ಕೊರೋನಾ ವೈರಸ್) ಮುಂಜಾಗ್ರತೆಯ ಕ್ರಮವಾಗಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಯವರು ದಿನಾಂಕ: 15.03.2020 ಮತ್ತು 16.03.2020 ರಂದು ಕೈಗೊಳ್ಳಲು ಉದ್ದೇಶಿಸಿರುವ ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ ಎಂದು ತಮಗೆ ತಿಳಿಸಲು ನಿರ್ದೇಶಿತನಾಗಿರುತ್ತೇನೆ ಎಂದು ಚನ್ನಬಸವೇಶ ಅವರು ತಿಳಿಸಿದ್ದಾರೆ.

CM Yediyurappa Canceled his District Tour due to Coronavirus

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರೂ ಕೂಡ ಮುಖ್ಯಮಂತ್ರಿಗಳ ಕಾರ್ಯಕರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಎಲ್ಲ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲ ಪ್ರವಾಸ ಕಾರ್ಯಕ್ರಮಗಳನ್ನು ಸೋಮಶೇಕರ್ ಅವರು ರದ್ದು ಮಾಡಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾರ್ಚ್ 14,15 ಹಾಗೂ 16ರಂದು ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಪ್ರವಾಸವನ್ನು ರದ್ದು ಮಾಡಿರುವುದಾಗಿ ಅವರ ಪತ್ರಿಕಾ ಕಾರ್ಯದರ್ಶಿ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+