96 ಕೇಂದ್ರ ಸರ್ಕಾರ ಯೋಜನೆಗಳ ತ್ವರಿತಗತಿ ಅನುಷ್ಠಾನಕ್ಕೆ ಸಿಎಂ ಸೂಚನೆ
ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರದ ಯೋಜನೆಗಳ ತ್ವರಿತಗತಿ ಅನುಷ್ಠಾನ ಸಂಬಂಧ ಮಾಹಿತಿ ಕಲೆಹಾಕುವಂತೆ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
Recommended Video
24 ಇಲಾಖೆಗಳಲ್ಲಿನ 96 ಕೇಂದ್ರ ಯೋಜನೆಗಳು ಹಾಗೂ ಕೇಂದ್ರ ಅನುದಾನಿತ ಯೋಜನೆಗಳ ಪಗ್ರತಿ ಪರಿಶೀಲನೆ ಸಂಬಂಧ ಮಂಗಳವಾರ ಸಭೆ ನಡೆಸಲಾಗಿದ್ದು, ಶೀಘ್ರವೇ ಯೋಜನೆಗಳ ಪ್ರಗತಿ ಸಂಬಂಧ ವರದಿ ನೀಡುವಂತೆ ಸೂಚಿಸಿದರು.
ಜಲಜೀವನ್ ಮಿಷನ್, ನ್ಯಾಷನಲ್ ಹೆಲ್ತ್ ಮಿಷನ್ ಹಾಗೂ ಪಿಎಂ ಆವಾಸ್ ಯೋಜನಾ ಯೋಜನೆಗಳ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿದರು.

ಮಂಗಳವಾರ 11 ಪ್ರಮುಖ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. 22 ವಿವಿಧ ಇಲಾಖೆಗಳಲ್ಲಿನ 96 ಕೇಂದ್ರ ಯೋಜನೆಗಳು ಅನುಷ್ಠಾನದಲ್ಲಿವೆ. 2020-21ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಒಟ್ಟು ಅನುನಾದ 39,601 ಕೋಟಿಗಳಾಗಿದ್ದು, ಇದರಲ್ಲಿ 18,715 ಕೋಟಿ ರೂ ಕೇಂದ್ರದ್ದಾಗಿದೆ. 2021ರ ಮಾರ್ಚ್ ವೇಳೆಗೆ 16,320 ಕೋಟಿ ರೂ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2020-21ನೇ ಸಾಲಿನಲ್ಲಿ 6466 ಕೋಟಿ ರೂ ಅನುದಾನ ಕೇಂದ್ರದಿಂದ ಬಿಡುಗಡೆಯಾಗಬೇಕಿದೆ. ಸದ್ಯಕ್ಕೆ 5605 ಕೋಟಿ ರೂ ಬಿಡುಗಡೆಯಾಗಿದೆ ಎಂದರು.
ಮಂಗಳವಾರ ಹಲವು ವಿಷಯಗಳ ಸಂಬಂಧ ಸಿಎಂ ಸಭೆ ನಡೆಸಿದ್ದು, ಇದರಲ್ಲಿ ಪ್ರಮುಖವಾಗಿ ರಾಜ್ಯ ಸರ್ಕಾರಿ ನೌಕರರಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡುವಂತೆ ಸಿಎಂ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದರು.
ಈ ಸಂಬಂಧ ಅಧಿಕೃತ ಆದೇಶ ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಅಖಿಲ ಭಾರತ ಬೆಲೆ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ನೌಕರರಿಗೆ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಏರಿಕೆ ದರ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದರ ನಡುವೆ ರಾಜ್ಯದಲ್ಲಿ ಮಳೆಯಿಂದ ಆಗುತ್ತಿರುವ ಹಾನಿ ಹಾಗೂ ಕೈಗೊಳ್ಳಲಾಗಿರುವ ಪರಿಹಾರ ಕ್ರಮಗಳ ಕುರಿತು ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಪ್ರವಾಹ ತಡೆಗಟ್ಟಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಹಣ ಬಿಡುಗಡೆ ಮಾಡುತ್ತೇವೆ ಎಂದು ಇದೇ ಸಂದರ್ಭ ಯಡಿಯೂರಪ್ಪ ಭರವಸೆ ನೀಡಿದರು.












Click it and Unblock the Notifications