ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ: ಸಿಎಂ ಸೂಚನೆ

ಬೆಂಗಳೂರು, ಜೂನ್ 02: ಕೋವಿಡ್-19 ನಿಂದಾಗಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ ಕಾಮ್ಸ್ ನೌಕರರ ವಿರುದ್ಧ ಪರಿಶೀಲನೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Recommended Video

      BSY is only on screen CM of Karnataka | Oneindia Kannada

      ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

      ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣಸ್ವಾಮಿ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

      ರಾಜ್ಯದ 550 ಹಾಪ್‍ ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಸಿಎಂ ಯಡಿಯೂರಪ್ಪ ಸೂಚಿಸಿದರು.

      ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಡಿ

      ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಡಿ

      ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಇಲ್ಲವಾಗಿದೆ. ಹೊಸ ಕೊಳವೆಬಾವಿಗಳನ್ನು ಕೊರೆಯಲು ಅನುಮತಿ ನೀಡಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶಿಸಿದರು.

      ಬಿತ್ತನೆ ಬೀಜ ಬಗ್ಗೆ ಬಿ.ಸಿ.ಪಾಟೀಲ್ ಮಾಹಿತಿ

      ಬಿತ್ತನೆ ಬೀಜ ಬಗ್ಗೆ ಬಿ.ಸಿ.ಪಾಟೀಲ್ ಮಾಹಿತಿ

      ''ಕಳೆದ ಸಾಲಿನಲ್ಲಿ ಹೆಚ್ಚುವರಿ ಬಿತ್ತನೆ ಬೀಜವನ್ನು ಖರೀದಿಸಿ ವಿತರಿಸಲಾಗಿತ್ತು. ಈ ಬಾರಿಯೂ ವಿತರಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಆಹಾರ ಪದಾರ್ಥಗಳ ಸರಪಳಿ ನಿರ್ವಹಣಾ ಕೋಶ ಕಾರ್ಯ ನಿರ್ವಹಿಸುತ್ತಿದೆ. ಅಗ್ರಿ ವಾರ್ ರೂಂ ಸ್ಥಾಪಿಸಿದ್ದು, ಪರಿಕರಗಳ ಲಭ್ಯತೆ, ಉತ್ಪನ್ನಗಳ ಮಾರಾಟ, ಸಾಗಾಣಿಕೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸಲಾಗಿದೆ'' ಎಂದು ಸಚಿವ ಬಿ.ಸಿ.ಪಾಟೀಲ್ ಮಾಹಿತಿ ಒದಗಿಸಿದರು. ಕರ್ನಾಟಕಕ್ಕೆ ಮಿಡತೆ ಹಾವಳಿ ಇರುವುದಿಲ್ಲ ಎಂದೂ ವಿಜ್ಞಾನಿಗಳು ಖಚಿತಪಡಿಸಿರುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

      ಅಧಿಕಾರಿಗಳನ್ನು ವಾಪಸ್ ಕರೆಯಿಸಿಕೊಳ್ಳಿ..

      ಅಧಿಕಾರಿಗಳನ್ನು ವಾಪಸ್ ಕರೆಯಿಸಿಕೊಳ್ಳಿ..

      ಕೃಷಿ ಹಾಗೂ ತೋಟಗಾರಿಕೆ ಇಲಾಖೆಯಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿರುವ ಅಧಿಕಾರಿ/ಸಿಬ್ಬಂದಿಯನ್ನು ಮಾತೃ ಇಲಾಖೆಗೆ ವಾಪಸ್ಸು ಕರೆಯಿಸಿಕೊಳ್ಳವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದರು.

       ರೇಷ್ಮೆ ಇಲಾಖೆ

      ರೇಷ್ಮೆ ಇಲಾಖೆ

      ಹಿಪ್ಪುನೇರಳೆ ವಿಸ್ತೀರ್ಣಕ್ಕೆ ಸಂಬಂಧಿಸಿದಂತೆ ಡ್ರೋನ್ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಒತ್ತುವರಿ ಆಗಿರುವ ಸರ್ಕಾರಿ ಜಮೀನನ್ನು ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರು.

      ಇದೇ ಸಂದರ್ಭದಲ್ಲಿ ಮೆಕ್ಕೆ ಜೋಳ ಹಾಗೂ ಹೂವು ಬೆಳೆಗಾರರಿಗೆ ಒಟ್ಟು 666 ಕೋಟಿ ರೂ.ಗಳ ಮೊತ್ತವನ್ನು ಆನ್ ಲೈನ್ ಮೂಲಕ ಬಿಡುಗಡೆ ಮಾಡಿದರು. ಈ ಬಗ್ಗೆ ರೈತರಿಗೆ ಕರೆ ಮಾಡಿ ಹಣ ಸಂದಾಯವಾಗಿರುವ ಬಗ್ಗೆ ಸಿಎಂ ಯಡಿಯೂರಪ್ಪ ಖಾತರಿಪಡಿಸಿಕೊಂಡರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+