ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಕಲಿ ಪಡಿತರ ಚೀಟಿ ರದ್ದುಗೊಳಿಸಿ ಕಾನೂನು ಕ್ರಮಕ್ಕೆ ಸಿಎಂ ಸೂಚನೆ!

|
Google Oneindia Kannada News

ಬೆಂಗಳೂರು, ಜೂನ್ 4: ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅಂಥವರ ಮೇಲೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಈ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ತಲುಪಬೇಕು. ಜೊತೆಗೆ ಅನರ್ಹರು ಈ ಸೌಲಭ್ಯ ದುರುಪಯೋಗ ಪಡಿಸಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಕಲಿ ಪಡಿತರ ಚೀಟಿ ರದ್ದುಗೊಳಿಸಿ ಕಾನೂನು ಕ್ರಮಕ್ಕೆ ಸಿಎಂ ಸೂಚನೆ!ನಕಲಿ ಪಡಿತರ ಚೀಟಿ ರದ್ದುಗೊಳಿಸಿ ಕಾನೂನು ಕ್ರಮಕ್ಕೆ ಸಿಎಂ ಸೂಚನೆ!

ಕೊರೊನಾ ವೈರಸ್‌ನಿಂದ ಜಾರಿಗೆ ಬಂದ ಲಾಕ್‌ಡೌನ್‌ ಜಾರಿಗೂ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳ ರದ್ದುಪಡಿಸಲು ಅಭಿಯಾನ ನಡೆಸುವಂತೆ ಸಿಎಂ ಸೂಚಿಸಿದ್ದಾರೆ. ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ. ಆಹಾರ ಮತ್ತು ನಾಗರಿಕರ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ. ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಹೇಳಿದ್ದಾರೆ.

CM Yediyurappa has instructed to the officials to cancel the fake ration card and take legal action

ಕೊರೊನಾ ವೈರಸ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ವಿತರಣೆ ಮಾಡಲಾಗಿದೆ. ಶೇ. 95ರಷ್ಟು ಪಡಿತರ ಚೀಟಿದಾರರು ಪಡಿತರ ಪಡೆದು ಕೊಂಡಿದ್ದಾರೆ. ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆ ಅಡಿ 98,079 ಫಲಾನುಭವಿಗಳಿಗೆ 3 ಅನಿಲ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗಿದೆ.

ನಿಗಮದ 53 ಗೋದಾಮುಗಳು ಶಿಥಿಲಾವಸ್ಥೆಯಲ್ಲಿದ್ದು, 42 ಖಾಲಿ ನಿವೇಶನಗಳು ನಿಗಮದ ಒಡೆತನದಲ್ಲಿದೆ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿರುವ ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ 95 ಗೋದಾಮುಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

CM Yediyurappa has instructed to the officials to cancel the fake ration card and take legal action

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

English summary
CM Yediyurappa has asked the officials to cancel the fake ration card and take legal action,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X