ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಸತಿ ಯೋಜನೆಗಳಡಿ ಒಂಭತ್ತು ಲಕ್ಷ ಮನೆಗಳ ನಿರ್ಮಾಣಕ್ಕೆ ರಾಜ್ಯ ಬಿಜೆಪಿ ಸರ್ಕಾರ ತೀರ್ಮಾನ!

|
Google Oneindia Kannada News

ಬೆಂಗಳೂರು, ಜು. 08: ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಮಹತ್ವದ ಸಭೆಯಲ್ಲಿ ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಉದ್ದೇಶಿಸಿರುವ ಲಕ್ಷ ಮನೆಗಳಲ್ಲಿ ರಾಜ್ಯದ ವಸತಿ ಯೋಜನೆಗಳಡಿ 5 ಲಕ್ಷ ಮನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಡಿ 4 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮನೆಗಳನ್ನು ನಿರ್ಮಾಣ ಮಾಡಲು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಫಲಾನುಭವಿಗಳಿಗೆ 1.75 ಲಕ್ಷ ರೂಪಾಯಿಗಳು ಮತ್ತು ಇತರರಿಗೆ 1.20 ಲಕ್ಷ ರೂಪಾಯಿಗಳಷ್ಟು ಸಹಾಯಧನ ದೊರೆಯುತ್ತದೆ.

ಕೇಂದ್ರದ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳಿಗೆ ಫಲಾನುಭವಿಗಳಿಗೆ ಶೇ. 60 ಅಂದರೆ 72 ಸಾವಿರ ರೂಪಾಯಿಗಳು ಮತ್ತು ರಾಜ್ಯದ ಪಾಲು ಶೇ. 40 ಅಂದರೆ 48 ಸಾವಿರ ರೂ. ಸಹಾಯಧನ ಸೇರಿರುತ್ತದೆ. ಎಲ್ಲ ಯೋಜನೆಗಳನ್ನು ಸೇರಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುವುದು.

CM Yediyurappa Has Taken Decision construct 9 lakh Houses in 2 years under different housing projects

"ಪ್ರಸ್ತುತ ನಿರ್ಮಾಣದ ವಿವಿಧ ಹಂತಗಳಲ್ಲಿರುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿ ಮನೆಗಳನ್ನು ಪೂರ್ಣ ಮಾಡಲು 6.2 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಹಂತ ಹಂತವಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆಯಲ್ಲಿ ಹೇಳಿದ್ದಾರೆ.

Recommended Video

Rockline Venkatesh : ಅಂಬರೀಶ್ ಬಗ್ಗೆ ಮಾತನಾಡೋದಕ್ಕೆ ಅವರು ಯಾರು? | Oneindia Kannada

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಯೋಜನೆಯಡಿ 1 ಲಕ್ಷ ಬೆಂಗಳೂರು ಬಹು ಮಹಡಿ ಯೋಜನೆಯಡಿ ಆಗಸ್ಟ್ 15 ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ 5 ಸಾವಿರ ಮನೆಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.

English summary
Chief Minister B.S. Yediyurappa Has Taken Decision construct 9 lakh Houses in 2 years under different housing projects in the state. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X