ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಸರಣಿ ಟ್ವೀಟ್ ಮಾಡಿದ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜನವರಿ 18: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸ್ಥಾಪನೆಯಾಗಲಿರುವ ಕ್ಷಿಪ್ರ ಕಾರ್ಯ ಪಡೆ(Rapid Action Force)ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಹಿಂದಿ ಹೇರಿಕೆಯಾಗಿದ್ದು, ಕನ್ನಡತನ ನಾಶಗೊಳಿಸುವ ವ್ಯವಸ್ಥಿತ ದಾಳಿ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಭದ್ರಾವತಿಯಲ್ಲಿ ಕನ್ನಡತನ ನಾಶಗೊಳಿಸುವ ವ್ಯವಸ್ಥಿತ ದಾಳಿ: ಕರವೇ ಭದ್ರಾವತಿಯಲ್ಲಿ ಕನ್ನಡತನ ನಾಶಗೊಳಿಸುವ ವ್ಯವಸ್ಥಿತ ದಾಳಿ: ಕರವೇ

ಯಡಿಯೂರಪ್ಪ ಅವರು ಸರಣಿ ಟ್ವೀಟ್ಸ್ ಹೀಗಿದೆ:
'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ.

ಹಿಂದೀವಾಲಾಗಳಿಗೆ ಯಡಿಯೂರಪ್ಪ ಸರಕಾರದ ಶರಣಾಗತಿಯ ಪರಮಾವಧಿ ಹಿಂದೀವಾಲಾಗಳಿಗೆ ಯಡಿಯೂರಪ್ಪ ಸರಕಾರದ ಶರಣಾಗತಿಯ ಪರಮಾವಧಿ

ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

CM Yediyurappa hits out at CM Uddhav’s demand of wanting the Marathi speaking land from Karnataka

Recommended Video

karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada

ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ' : ಮುಖ್ಯಮಂತ್ರಿ

English summary
CM Yediyurappa hits out at CM Uddhav Thackeray’s demand of wanting the Marathi speaking land from Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X