ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿನ ಕಾವೇರಿ ನದಿ ಜೋಡಣೆ ಯೋಜನೆಗೆ ಯಡಿಯೂರಪ್ಪ ವಿರೋಧ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಕಾವೇರಿ ನದಿ ಮತ್ತು ಅದರ ಉಪನದಿಗಳನ್ನು ಜೋಡಣೆ ಮಾಡುವ ಮೂಲಕ ನಮಾಮಿಗಂಗೆ ಮಾದರಿಯಲ್ಲಿ ಪುನಶ್ಚೇತನಗೊಳಿಸಬೇಕಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ನೀಡಿರುವ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಸರ್ಕಾರದ ಉದ್ದೇಶಿತ ಕಾವೇರಿ ನದಿ ಜೋಡಣೆ ಯೋಜನೆ ಕಾರ್ಯಗತವಾಗಲು ಬಿಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ, ತಮಿಳುನಾಡು ಸರ್ಕಾರ ವೆಲ್ಲಾರ್- ವೈಗೈ-ಗುಂಡಾರ್ ನದಿ ನೀರನ್ನು ಕಾವೇರಿ ನದಿ ಜೊತೆ ಜೋಡಣೆ ಮಾಡುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್

ಚುನಾವಣೆ ಹೊಸ್ತಿಲಲ್ಲಿ ಸುಮಾರು 14,400 ಕೋಟಿ ರು ಯೋಜನೆಗೆ ತಮಿಳುನಾಡು ಸರ್ಕಾರ ಚಾಲನೆ ನೀಡಿದೆ, ಸುಮಾರು 6,000 ಕ್ಯೂಬಿಕ್ ಅಡಿ ಹೆಚ್ಚುವರಿ ನೀರನ್ನು ಒಣ ಪ್ರದೇಶಗಳಿಗೆ ಹರಿಸಲಾಗುವುದು ಎಂದು ಅಲ್ಲಿನ ಸರ್ಕಾರ ಯೋಜನೆಯ ಉದ್ದೇಶಗಳಲ್ಲಿ ನಮೂದಿಸಿದೆ.

CM Yediyurappa opposes Tamil Nadu govts Cauvery River Linking Project

ಕಳೆದ ನಾಲ್ಕು ವರ್ಷಗಳಲ್ಲಿ, 10 ಲಕ್ಷ ಹೆಕ್ಟೇರ್ ಒಣ ಭೂಮಿ 9.49 ಲಕ್ಷ ರೈತರಿಗೆ ಲಾಭವಾಗುತ್ತಿದೆ, 803 ಕೋಟಿ ರೂ. ವೆಚ್ಚದಲ್ಲಿ ರಾಗಿಗಳಲ್ಲಿ 34 ಪ್ರತಿಶತ ಮತ್ತು ಎಣ್ಣೆಕಾಳುಗಳಲ್ಲಿ ಶೇ.27 ರಷ್ಟು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಗೋದಾವರಿ,ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ: ಪಳನಿಸ್ವಾಮಿಗೋದಾವರಿ,ಕಾವೇರಿ ನದಿ ಜೋಡಣೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ: ಪಳನಿಸ್ವಾಮಿ

ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಲಕ್ಷಾಂತರ ಜನರಿಗೆ ಅನುಕೂಲವಾಗುವಂತೆ ಗೋದಾವರಿ-ಕಾವೇರಿ ನದಿ ಸಂಪರ್ಕಿಸುವ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮೇಕೇದಾಟು ಅಣೆಕಟ್ಟು ವಿವಾದ
ವ್ಯರ್ಥವಾಗಿ ಹರಿದು ಹೋಗುತ್ತಿದ್ದ ಕಾವೇರಿ ನದಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಅಣೆಕಟ್ಟು ನಿರ್ಮಿಸುವ ಉದ್ದೇಶವನ್ನು ಹೊಂದಲಾಗಿದೆ. ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಅರ್ಕಾವತಿ ಮತ್ತು ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯವನ್ನು ನಿರ್ಮಿಸಲಾಗುತ್ತಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ

ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಸಾಮಾನ್ಯ ಮಳೆ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಮಾಸಿಕವಾಗಿ ಹರಿಸಲಾಗುವುದು. ಅದೇ ರೀತಿ ಬೆಂಗಳೂರಿಗೆ ಹಂಚಿಕೆಯಾಗಿರುವ 4.75 ಟಿಎಂಸಿ ನೀರನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರ ಸಮರ್ಥಿಸಿಕೊಂಡಿದೆ.

English summary
Karnataka CM Yediyurappa Says Won't Allow Tamil Nadu To Go Ahead With Cauvery River Linking Project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X