ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಜೂನ್ 14 ನಂತರ 11 ಜಿಲ್ಲೆಗಳಿಗೆ ಲಾಕ್‌ಡೌನ್ ಸಡಿಲಿಕೆ ಇಲ್ಲ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಜೂನ್ 10: ಜೂನ್ 14ರ ನಂತರ 11 ಜಿಲ್ಲೆಗಳಿಗೆ ಲಾಕ್‌ಡೌನ್ ಸಿಡಿಲಿಕೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

Recommended Video

ಯಾವ್ಯಾವ ಜಿಲ್ಲೆಗಳು Unlock: ಹೊಸ ಮಾರ್ಗಸೂಚಿಯಲ್ಲೇನಿದೆ? | CM Yediyurappa | Oneindia Kannada

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಕೊಡಗು, ಮಂಡ್ಯದಲ್ಲಿ ಲಾಕ್‌ಡೌನ್ ಮುಂದುವರೆದಿದೆ.

Karnataka Lockdown

ಉಳಿದ ಜಿಲ್ಲೆಗಳಲ್ಲಿ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿವರಣೆ ನೀಡಿದ್ದಾರೆ. ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಶೇ.30ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

ಅನ್‌ಲಾಕ್ ಮಾಡಿರುವ ಜಿಲ್ಲೆಗಳಲ್ಲಿ ಮಧ್ಯಾಹ್ನ 2ರವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಇನ್ನೂ ಒಂದು ವಾರಗಳ ಕಾಲ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರೆಯಲಿದೆ.

ಅನ್‌ಲಾಕ್ ಆಗಿರುವ ಜಿಲ್ಲೆಗಳಲ್ಲಿ ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2 ಗಂಟೆಯವರೆಗೂ ಅವಕಾಶ ನೀಡಲಾಗಿದೆ.ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ. ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ.

ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಆರರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಲ್ಲದೇ ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದರು.

English summary
CM Yediyurappa press meet highlights on Karnataka unlock: Here is what's allowed to open and whats remain closed. Take a look
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X