ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಗರಂ: ನಮ್ಮ ಜಾಗದಲ್ಲಿ ಇದ್ದರೆ ಏನ್ ಮಾಡ್ತಿದ್ರಿ? ಅದ್ನೆಲ್ಲಾ ಮಾಡಿ ಅಂತಾ ನಾನು ಹೇಳಿದ್ನಾ?

|
Google Oneindia Kannada News

ಬೆಂಗಳೂರು, ಫೆ. 23: ಪ್ರಶ್ನೆ ಕೇಳಿದವರ ಮೇಲೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗರಂ ಆದ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಕಲ್ಲು ಕ್ವಾರಿ ಸ್ಪೋಟದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ತಮ್ಮ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಶಕ್ತಿಭವನದಲ್ಲಿ ಬಜೆಟ್ ಪೂರ್ವ ತಯಾರಿ ಸಭೆಗೂ ಮೊದಲು ಮಾತನಾಡಿದ್ದಾರೆ. ರಾಜ್ಯದಲ್ಲಿ ಪದೇ ಪದೇ ಇಂತಹ ದುರ್ಘಟನೆಗಳು ಆಗುತ್ತಿವೆ, ಸರ್ಕಾರ ಯಾಕೆ ಬಿಗಿ ಕ್ರಮ ಕೈಗೊಂಡಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ್ದಕ್ಕೆ ಸಿಎಂ ಯಡಿಯೂರಪ್ಪ ಅವರು ಗರಂ ಆಗಿದ್ದಾರೆ.

ಯಡಿಯೂರಪ್ಪ ಅವರು, ನಾವು ನೀವು ಏನ್ ಮಾಡೋಕೆ ಆಗುತ್ತೆ ರೀ..? ನಮ್ಮ ಜಾಗದಲ್ಲಿ ನೀವು ಇದ್ದರೆ ನೀವು ಏನ್ ಮಾಡ್ತಿದ್ರಿ ಹೇಳಿ..? ನಾವು ಅವರಿಗೆ ಹೇಳಿದ್ವಾ..? ಬೆಳಗಿನ ಜಾವ ಹೋಗಿ ಅದನ್ನೆಲ್ಲಾ ಮಾಡಿ ಅಂತಾ. ಸಿದ್ದರಾಮಯ್ಯ ಮಾತು ಬಿಡಿ. ಇನ್ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸ್ತೇವೆ ಎಂದು ಉತ್ತರಿಸಿದ್ದಾರೆ.

ಇಂತಹ ಪ್ರಕರಣಗಳ ತಡೆಗೆ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಬೇಕಿದ್ದರೆ ಸಲಹೆಗಳನ್ನು ಕೊಡಲಿ. ಆ ಸಲಹೆಗಳ ಆಧಾರದ ಮೇಲೆ ನಾವು ಬಿಗಿ ಕ್ರಮ ಕೈಗೊಳ್ತೇವೆ. ಅದನ್ನು ಬಿಟ್ಟು ದಾರಿ ತಪ್ಪಿಸುವ ಹೇಳಿಕೆ ನೀಡುವುದು ಬೇಡ ಎಂದಿದ್ದಾರೆ.

ಗೃಹ ಸಚಿವರಿಂದ ಪರಿಶೀಲನೆ

ಗೃಹ ಸಚಿವರಿಂದ ಪರಿಶೀಲನೆ

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇದು ರಾಜ್ಯದಲ್ಲಿ ನಡೆದಿರುವ ಎರಡನೇ ಘಟನೆ. ಅದೂ ಕಾನೂನು ಬಾಹಿರವಾಗಿ ನಡೆದಿರುವ ಘಟನೆ ಇದು. ಇಂತಹ ಘಟನೆಗಳ ತಡೆಗೆ ಏನ್ ಕಠಿಣ ಕ್ರಮ ಕೈಗೊಳ್ಳಬಹುದು ಎಂದು ಯೋಚನೆ ಮಾಡ್ತಿದ್ದೇವೆ. ಯಾರೇ ಭಾಗಿಯಾಗಿದ್ದರೂ ಕಾನೂನು ರೀತಿ ಕ್ರಮ ತಗೊತ್ತೇವೆ. ಇನ್ಮುಂದೆ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ. ಸಿದ್ದರಾಮಯ್ಯ ಇರೋದೆ ಬರಿ ಆರೋಪ ಮಾಡೋಕೆ. ಅವರ ಬಗ್ಗೆ ತಲೆಕೆಡೆಸಿಕೊಳ್ಳ ಬೇಡಿ. ಆದರೆ ಯಾವ ರೀತಿ ಕಠಿಣ ಕ್ರಮ ಕೈಗೊಳ್ಳಬೇಕೂ ಅದರತ್ತ ಇನ್ಮುಂದೆ ಗಮನ ಹರಿಸ್ತೀವಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಡಿಕೆಶಿ, ಸಿದ್ದು ಮೇಲೆ ಸಿಎಂ ವಾಗ್ದಾಳಿ

ಡಿಕೆಶಿ, ಸಿದ್ದು ಮೇಲೆ ಸಿಎಂ ವಾಗ್ದಾಳಿ

ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆರೋಪಕ್ಕೆ ಸಿಎಂ ಯಡಿಯೂರಪ್ಪ ಅವರು ತಿರುಗೇಟು ನೀಡಿದ್ದರೆ. ಯಾರು ಏನು ಆರೋಪ ಮಾಡುತ್ತಾರೆ ಅನ್ನೋದು ಮುಖ್ಯ ಅಲ್ಲ. ಘಟನೆಯಲ್ಲಿ ಪ್ರಾಣ ಹೋದವರ ಬಗ್ಗೆ ನಮಗೆ ಅನುಕಂಪ ಇರಬೇಕು. ಇಂತಹ ಘಟನೆಗಳು ಮರುಕಳಿಸಬಾರದು. ಪ್ರಕರಣದಲ್ಲಿ ಯಾರೇ ಇದ್ದರೂ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಪಕ್ಷ, ಪಂಗಡ ಅಂತ ಪ್ರಶ್ನೆ ಬರಲ್ಲ. ಅದು ಕಾನೂನುಬಾಹಿರವಾಗಿ ನಡೆದಿರುವ ಘಟನೆ. ಹೀಗಾಗಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು, ಅದನ್ನು ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ.

ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದ ಡಿಕೆಶಿ

ಸರ್ಕಾರದ ಮೇಲೆ ವಾಗ್ದಾಳಿ ಮಾಡಿದ್ದ ಡಿಕೆಶಿ

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದರು. 6 ಮಂದಿ ಅಮಾಯಕರು ದುರ್ಘಟನೆಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಆ ಘಟನೆಗೆ ಬಿಜೆಪಿ ಸರ್ಕಾರದ ಅಸಡ್ಡೆಯೇ ಕಾರಣ. ಒಂದೇ ತಿಂಗಳಲ್ಲಿ ಎರಡನೇ ಭಾರಿ ದುರ್ಘಟನೆಗಳು ನಡೆದಿವೆ. ಆಂತರಿಕ ಸಮಸ್ಯೆಯಲ್ಲಿ ಬಿಜೆಪಿ ಸರ್ಕಾರ ಮೈಮರೆತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದು ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯ ಸರ್ಕಾರದ ನಿಷ್ಕ್ರಿಯತೆ

ರಾಜ್ಯ ಸರ್ಕಾರದ ನಿಷ್ಕ್ರಿಯತೆ

ಇದೇ ದುರ್ಘಟಘಟನೆಗೆ ಸಂಬಂಧಿಸಿದಂತೆ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಶಿವಮೊಗ್ಗದ ನಂತರ ಚಿಕ್ಕಬಳ್ಳಾಪುರದಲ್ಲಿ ಘಟನೆ ನಡೆದಿದೆ. ಈ ಸ್ಫೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಬೇಜವಾಬ್ದಾರಿತನ, ಅಕ್ರಮ ಶಾಮೀಲಾಗಿರುವುದಕ್ಕೆ ಇದು ಸಾಕ್ಷಿ. ಸಿಎಂ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನಾ? ಭ್ರಷ್ಟರನ್ನಾ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು.

ಅಮಾಯಕ ಕಾರ್ಮಿಕರ ದುರ್ಮರಣ ಆಘಾತಕಾರಿ, ಮೃತರ ಆತ್ಮಕ್ಕೆ ಶಾಂತಿಕೋರುವೆ. ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಕೊಡಿ. ನೊಂದ ಕುಟುಂಬಗಳಿಗೆ ಪರಿಹಾರ ಘೋಷಿಸಿ ಎಂದು ರಾಜ್ಯ ಸರ್ಕಾವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದರು.

English summary
Chief Minister BS Yediyurappa's first reaction to Chikkaballapur blast case in Shaktibhavan, Bengaluru. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X