ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮರಾಠ ಅಭಿವೃದ್ಧಿ ಪ್ರಾಧಿಕಾರ: ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಏನು ಗೊತ್ತಾ?

|
Google Oneindia Kannada News

ಬೆಂಗಳೂರು, ನ. 21: ಉಪ ಚುನಾವಣೆ ನಡೆದ ಎರಡು ಕ್ಷೇತ್ರಗಳಲ್ಲಿನ ಭರ್ಜರಿ ಜಯದ ಬಳಿಕವೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದೆ. ಅದಕ್ಕೆ ಕಾರಣ ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಯಡಿಯೂರಪ್ಪ ಅವರು ಮುಂದಾಗಿರುವುದು. ಅದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಡೀ ರಾಜ್ಯಾದ್ಯಂತ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿಯೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂಬುದು ಗುಟ್ಟಾಗಿ ಉಳಿಸಿದ್ದ. ಜೊತೆಗೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗುತ್ತಿದ್ದಂತೆಯೆ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನಗೆ ಒತ್ತಡ ಹೆಚ್ಚಾಗಿತ್ತು. ಸ್ವಂತ ಸಮುದಾಯದ ಬೇಡಿಕೆಗೆ ಇಲ್ಲ ಎನ್ನದೇ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಯಡಿಯೂರಪ್ಪ ಅಸ್ತು ಎಂದಿದ್ದರು.

ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

ಇದೀಗ ಲಿಂಗಾಯತ ಸಮುದಾಯದ ಕೆಲ ಸ್ವಾಮೀಜಿಗಳೇ ಜಾತಿಗೊಂದು ಪ್ರಾಧಿಕಾರ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಹಿಂದಕ್ಕೆ ಸರಿಯುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬರುವ ಡಿಸೆಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರ ಅಂತಿಮ ನಿರ್ಧಾರ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ!

ನಾನು ಸಹಿಸುವುದಿಲ್ಲ!

ನಾನು ಸಹಿಸುವುದಿಲ್ಲ!

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂ. ಅನುದಾನ ಕೊತ್ತಿರುವ ರಾಜ್ಯ ಸರ್ಕಾರ, ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಿರುವುದು ಕನ್ನಡ ಪರ ಸಂಘಟನೆಗಳನ್ನು ಕೆರಳಿಸಿದೆ. ಯಾವಾಗಲೂ ಬೆಳಾವಿಯಲ್ಲಿ ಗಡಿ ತಂಟೆ ತೆಗೆಯುವ ಮರಾಠ ಭಾಷಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆಯಿಂದ ಹಿಂದಕ್ಕೆ ಸರಿಯಬೇಕು ಎಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಇದಕ್ಕೆ ಸಿಎಂ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬಲವಂತವಾಗಿ ಬಂದ್ ಮಾಡೋಕೆ ನಾನು ಎಲ್ಲಿಯೂ ಅವಕಾಶ ಕೊಡುವುದಿಲ್ಲ. ಪ್ರತಿಕೃತಿ ದಹಿಸೋದು, ಬಹಳ ಕೆಟ್ಟದಾಗಿ ನಡೆದುಕೊಳ್ಳುವುದನ್ನು ನಾನು ಗಮನಿಸುತ್ತಿದ್ದೇನೆ. ನಾನು ಬಹಳ ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಯಡಿಯೂರಪ್ಪ ಅವರು ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಬಂದ್ ವಾಪಾಸ್ ಪಡೆಯಿರಿ!

ಬಂದ್ ವಾಪಾಸ್ ಪಡೆಯಿರಿ!

ಕೆಲವರು ಏನೋ ಮಾಡೋಕೆ ಹೊರಟಿದ್ದಾರೆ. ಅದನ್ನು ನಾನು ಸಹಿಸುವುದಿಲ್ಲ. ಅವರು ಇನ್ನಾದರೂ ಸುಮ್ಮನೆ ಇರಬೇಕು. ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಕೆಲಸ ಮಾಡುತ್ತಿದೆ. ಇದರಲ್ಲಿ ನಾವು ಯಾವುದೇ ಭೇದಭಾವವನ್ನು ಮಾಡುವುದಿಲ್ಲ. ಈಗಲಾದರೂ ಬಂದ್ ವಾಪಸ್ಸು ಪಡೆದು, ಚಳುವಳಿಗಾರರು ನಮಗೆ ಸಹಕಾರ ಕೊಡಬೇಕು ಎಂದು ಕೈ ಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಕನ್ನಡ ಪರ ಸಂಘಟನೆಗಳ ನಾಯಕರಲ್ಲಿ ಮನವಿ ಮಾಡಿದ್ದಾರೆ. ಜೊತೆಗೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಹಿಂದೆ ಸರಿಯುವ ಬಗ್ಗೆಯೂ ಮಾತನಾಡಿದ್ದಾರೆ.

ಆದೇಶ ವಾಪಸ್ ಪಡೆಯುವ ಪ್ರಶ್ನೆ ಇಲ್ಲ

ಆದೇಶ ವಾಪಸ್ ಪಡೆಯುವ ಪ್ರಶ್ನೆ ಇಲ್ಲ

ನಾನು ಕನ್ನಡಿಗರ, ಕನ್ನಡದ ಪರವಾಗಿ ಇರುವವನು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕನ್ನಡಿಗರಿಗೆ ಏನೇನು ಹೆಚ್ಚಿನ ಸವಲತ್ತು ಕೊಡಬೇಕು ಅದನ್ನು ಕೊಡಲು ಸಿದ್ದನಿದ್ದೇನೆ. ಆದರೆ ಬೇರೊಂದು ಕಾರಣ ಇಟ್ಟುಕೊಂಡು ಬಂದ್ ಕರೆ ಕೊಡೋದು ಸೂಕ್ತ ಅಲ್ಲ. ಜೊತೆಗೆ ಜನರು ಕೂಡ ಇದನ್ನು ಮೆಚ್ಚುವುದಿಲ್ಲ ಎಂದಿದ್ದಾರೆ.

ನಾವು ಎಲ್ಲರನ್ನೂ ಒಂದೇ ರೀತಿ ನೋಡುತ್ತೇವೆ. ಶಾಂತಿಯುತ ಹೋರಾಟಕ್ಕೆ ಅವಕಾಶವಿದೆ. ಪ್ರತಿಕ್ರತಿ ದಹಿಸಿದ್ರೆ ಸಹಿಸೋದಿಲ್ಲ. ಮರಾಠಾ ಸಮುದಾಯ ಅಭಿವೃದ್ದಿ ನಿಗಮ ಆದೇಶ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಅವರು ತಮ್ಮ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

Recommended Video

26 /11 ಅದೇ ದಿನ ಮತ್ತೊಂದು ದಾಳಿ ಸಾಧ್ಯತೆ | Oneindia Kannada
ದಿಸೆಂಬರ್ 5ರಂದು ಕರ್ನಾಟಕ ಬಂದ್!

ದಿಸೆಂಬರ್ 5ರಂದು ಕರ್ನಾಟಕ ಬಂದ್!

ಸರ್ಕಾರದ ಒತ್ತಡದ ಮಧ್ಯೆಯೂ ಕರ್ನಾಟಕ ಬಂದ್ ಶಾಂತಿಯುತವಾಗಿ ನಿಗದಿಯಂತೆ ನಡೆಯಲಿದೆ ಎಂದು ಕನ್ನಡ ಪರ ಸಂಘಟನೆಗಳು ತಿಳಿಸಿವೆ. ಬಂದ್‌ಗೆ ಆಟೋ ಡ್ರೈರ್‌ಗಳು ಹಾಗೂ ಟ್ಯಾಕ್ಷಿ ಸಂಘಟನೆಗಳು ಬೆಂಬಲ ಸೂಚಿಸಿವೆ. ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದಕ್ಕೆ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಹಾಗೂ ಇತರೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಇದೀಗ ನಮಗೆ ನಿಗಮ ಮಂಡಳಿ ಬೇಡ, ಮಹಾರಾಷ್ಟ್ರ ಮಾದರಿಯಲ್ಲಿ ಶೇಕಡಾ 16ರಷ್ಟು ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಬೇಕು ಎಂದು ಲಿಂಗಾಯತ ನಾಯಕರು ಹಾಗೂ ಮಠಾಧೀಶರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ಮತದಾರರನ್ನು ಓಲೈಕೆ ಮಾಡಲು ಹೋಗಿ ವಿವಾದವನ್ನು ಮೈಮೇಲೆ ಎಳೆದು ಕೊಂಡಂತಾಗಿದೆ.

English summary
On December 5, pro-Kannada organizations have called on the Karnataka bandh to withdraw from the formation of the Maratha Development Authority. Against this backdrop, Chief Minister B.S. Yediyurappa made a significant statement in Vidhanasoudha. What is Yediyurappa's final decision? Here's the full info!
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X