Breaking: ಸಂಜೆ 5 ಗಂಟೆಗೆ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ
ಬೆಂಗಳೂರು, ಜೂನ್ 3: ಲಾಕ್‌ಡೌನ್ ವಿಸ್ತರಣೆ ಹಾಗೂ ಕೊರೊನಾ 2ನೇ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಸಂಜೆ 5 ಗಂಟೆಗೆ ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ.
ಈಗಾಗಲೇ ಮೊದಲ ಕೊರೊನಾ ಪ್ಯಾಕೇಜ್‌ನಲ್ಲಿ 1250 ಕೋಟಿ ರೂ. ಘೋಷಣೆ ಮಾಡಿದ್ದರು. ಅದೇ ರೀತಿ 2ನೇ ಹಂತದ ಪ್ಯಾಕೇಜ್‌ನಲ್ಲಿ ಇತರ ವರ್ಗಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
2ನೇ ಹಂತದ ಪ್ಯಾಕೇಜ್‌ನಲ್ಲಿ ತಮ್ಮನ್ನು ಪರಿಗಣಿಸುವಂತೆ ಹಲವು ಕಾರ್ಮಿಕ ವರ್ಗಗಳು, ಶಿಕ್ಷಕರು, ರೈತರು, ನೇಕಾರರು ಸಿಎಂ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದರು.

ಇದೇ ವೇಳೆ ಲಾಕ್‌ಡೌನ್ ವಿಸ್ತರಣೆ ಕುರಿತು ಇಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಕೆಲವು ಸಚಿವರು ಲಾಕ್‌ಡೌನ್ ಪರವಾಗಿದ್ದರೆ, ಕೆಲವರು ಅನ್‌ಲಾಕ್ ಮಾಡಲು ಒತ್ತಾಯಿಸಿದ್ದಾರೆ.
Recommended Video
Karnataka Lockdown ನಿಯಮಗಳಲ್ಲಿ ಕೊಂಚ ಬದಲಾವಣೆ | Oneindia Kannada
ಸಿಎಂ ಯಡಿಯೂರಪ್ಪ ಮಹತ್ವದ ಸುದ್ದಿಗೋಷ್ಠಿ ಕರೆದಿರುವುದರಿಂದ, ಪ್ಯಾಕೇಜ್ ಘೋಷಿಸಿ, ಲಾಕ್‌ಡೌನ್ ವಿಸ್ತರಣೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಿದೆ.












Click it and Unblock the Notifications