ಮೋದಿ ಹೇಳಿದ ಸಪ್ತ ಸೂತ್ರ ನಿಯಮ ತಪ್ಪದೇ ಪಾಲಿಸಿ: ಯಡಿಯೂರಪ್ಪ

ಬೆಂಗಳೂರು, ಏಪ್ರಿಲ್ 14: ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದುವರೆಸಿವೆ. ಎರಡನೇ ಅವಧಿಗೆ 19 ದಿನಗಳ ಲಾಕ್ಡೌನ್ ವಿಸ್ತರಣೆ ಮಾಡಿ ಪ್ರಧಾನಿ ಮೋದಿ ಅವರು ಇಂದು ಘೋಷಣೆ ಮಾಡಿದ್ದನ್ನು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ, ಪ್ರಧಾನಿ ಮೋದಿ ಅವರ ಸೂಚನೆಯಂತೆ ಎಲ್ಲರೂ ನಿಯಮ ಪಾಲಿಸಬೇಕು, ನಿಯಮ ಮುರಿದೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು, ಹಾಟ್ ಸ್ಪಾಟ್ ಗಳಲ್ಲಿ ಮತ್ತಷ್ಟು ಕಠಿಣವಾದ ನೀತಿ ಜಾರಿಗೆ ಬರಲಿದೆ ಎಂದರು.

ಸಾಮಾಜಿಕ ಅಂತರವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು, ಬಡ ಕುಟುಂಬಗಳಿಗೆ ನೆರವಾಗಿ ಎಂದು ಮನವಿ ಮಾಡಿಕೊಳ್ಳುತ್ತೇನೆ, ಕೃಷಿಕರಿಗೆ ಯಾವುದೇ ತೊಂದರೆ ಆಗದಂತೆ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು ಮಾಡಿದ್ದೇವೆ, ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದರು.

ವಾಹನ ಜಪ್ತಿ, ಮದ್ಯ ಮಾರಾಟ ಬಗ್ಗೆ ಯಡಿಯೂರಪ್ಪ

ವಾಹನ ಜಪ್ತಿ, ಮದ್ಯ ಮಾರಾಟ ಬಗ್ಗೆ ಯಡಿಯೂರಪ್ಪ

ವಾಹನಗಳ ಜಪ್ತಿ: ರಾಜ್ಯದಲ್ಲಿ ಈ ವರೆಗೆ 57633 ವಾಹನಗಳನ್ನು ಸೀಜ್ ಮಾಡಿದ್ದೇವೆ, ನಿಮಯ ಮುರಿದಿದ್ದ 2185 ಜನರ ಮೇಲೆ ಜನರ ವಿರುದ್ಧ FIR ದಾಖಲು ಮಾಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದ ಬಳಿಕ ಮದ್ಯ ಮಾರಾಟ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ನಾಳೆ ಕೇಂದ್ರ ಸರ್ಕಾರದಿಂದ ಲಾಕ್ ಡೌನ್ ಕುರಿತು ಹೊಸ ಮಾರ್ಗಸೂಚಿ ಬರಲಿದೆ, ನಂತರ ಮದ್ಯ ಮಾರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರರು.

ಹಾಟ್ ಸ್ಪಾಟ್ ಏಪ್ರಿಲ್ 20ರ ತನಕ ತೀವ್ರ ನಿಗಾ

ಹಾಟ್ ಸ್ಪಾಟ್ ಏಪ್ರಿಲ್ 20ರ ತನಕ ತೀವ್ರ ನಿಗಾ

1. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ನಾನು ಸ್ವಾಗತಿಸುತ್ತೇನೆ.

2. ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ.

3. ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುವುದು.

4. ನಾಡಿನ ಜನತೆ ಸ್ವಯಂ ಪ್ರೇರಿತರಾಗಿ ಈ ಕ್ರಮಗಳಿಗೆ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ.

ಏಳು ಸಲಹೆ ಕಟ್ಟುನಿಟ್ಟಾಗಿ ಪಾಲಿಸಿ

ಏಳು ಸಲಹೆ ಕಟ್ಟುನಿಟ್ಟಾಗಿ ಪಾಲಿಸಿ

5. ಪ್ರಧಾನಿಯವರು ಹೇಳಿದಂತೆ ದೇಶದಲ್ಲಿ ಹಾಗೂ ನಮ್ಮ ರಾಜ್ಯದಲ್ಲಿಯೂ ಆರೋಗ್ಯ ಸೌಲಭ್ಯಗಳನ್ನು ಕಳೆದ ಎರಡು ತಿಂಗಳಲ್ಲಿ ಹೆಚ್ಚಿಸಲಾಗಿದೆ.

6. ಪ್ರಧಾನ ಮಂತ್ರಿಯವರು ನೀಡಿದ ಏಳು ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಕರ್ನಾಟಕದ ಜನತೆಗೆ ನಾನು ಮನವಿ ಮಾಡುತ್ತೇನೆ.

· ಮನೆಯ ಹಿರಿಯರ ವಿಶೇಷ ಕಾಳಜಿ ವಹಿಸಿ. ಯಾವುದೇ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಹೆಚ್ಚು ಜೋಪಾನ ಮಾಡಿ.

· ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಮನೆಯಲ್ಲಿ ಮಾಡಿದ ಮಾಸ್ಕ್ ಬಳಸಿ.

· ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆಯ ಸಲಹೆಗಳನ್ನು ಪಾಲಿಸಿ. ಬಿಸಿನೀರು, ಕಷಾಯ ಕುಡಿಯಿರಿ.

· ಆರೋಗ್ಯ ಸೇತು ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

· ಬಡ ಕುಟುಂಬಗಳಿಗೆ ನೆರವಾಗಿ.

· ನಿಮ್ಮ ಕೃಷಿ, ಉದ್ಯೋಗದಲ್ಲಿ ಸಹೋದ್ಯೋಗಿಗಳಿಗೆ, ನೌಕರರಿಗೆ ನೆರವಾಗಿ. ನೌಕರಿಯಿಂದ ತೆಗೆಯಬೇಡಿ.

· ಪೊಲೀಸ್,, ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರನ್ನು ಗೌರವಿಸಿ.

ಕೃಷಿ ಚಟುವಟಿಕೆಗಳಿಗೆ ಅಡ್ಡಿಇಲ್ಲ

ಕೃಷಿ ಚಟುವಟಿಕೆಗಳಿಗೆ ಅಡ್ಡಿಇಲ್ಲ

7. ದೇಶದಲ್ಲಾಗಲಿ,, ರಾಜ್ಯದಲ್ಲಾಗಲಿ, ಅಗತ್ಯ ವಸ್ತುಗಳ ಪೂರೈಕೆಗೆ, ಔಷಧಿ ಪೂರೈಕೆಗೆ ಯಾವುದೇ ತೊಂದರೆ ಇಲ್ಲ.

8. ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಕ್ರಮ ವಹಿಸಲಾಗುವುದು.

9. ವಿಶೇಷವಾಗಿ ವಲಸೆ ಕಾರ್ಮಿಕರು ಎಲ್ಲಿದ್ದೀರೋ ಅಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡುತ್ತೇನೆ.

10. 3ನೇ ಮೇ ವರೆಗೆ ಲಾಕ್ ಡೌನ್ ನಿಯಮ ಪಾಲಿಸಿ. ಎಲ್ಲಿದ್ದೀರೋ ಅಲ್ಲೇ ಸುರಕ್ಷಿತವಾಗಿರಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+