Get Updates
Get notified of breaking news, exclusive insights, and must-see stories!

ಗೋ ಬ್ಯಾಕ್‌ ಹೆಗ್ಡೆಗೆ ಡೋಂಟ್‌ಕೇರ್‌: ಜಯಪ್ರಕಾಶ್‌ ಹೆಗ್ಡೆ ಪಕ್ಷ ಸೇರ್ಪಡೆಗೆ ಕಾಂಗ್ರೆಸ್‌ ಮುಖಂಡರ ಸಮ್ಮತಿ

ಕುಂದಾಪುರ, ಮಾಚ್‌ 09: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್‌ ಆಕಾಂಕ್ಷಿಗಳ ಲಾಭಿ, ಪಕ್ಷಾಂತರ ಜೋರಾಗಿದೆ. ಈ ನಡುವೆ ಕರಾವಳಿಯ ಜನ ನಾಯಕ ಎನಿಸಿಕೊಂಡಿರುವ ಜಯಪ್ರಕಾಶ್‌ ಹೆಗ್ಡೆ ನಿಲುವು ಇನ್ನೂ ನಿಗೂಢವಾಗಿದೆ. ಜಯಪ್ರಕಾಶ್‌ ಹೆಗ್ಡೆ ಮತ್ತೆ ಕಾಂಗ್ರೆಸ್‌ ಸೇರಿ ಉಡುಪಿ-ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿದೆ.

ಈ ಬಗ್ಗೆ ಕರಾವಳಿಯ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ತತ್ವದ ಮೇಲೆ ನಂಬಿಕೆ ಇಟ್ಟು ಯಾರೇ ಆದರೂ ಪಕ್ಷವನ್ನು ಸೇರುವುದಾದರೆ ಅವರನ್ನು ಪಕ್ಷ ಸ್ವಾಗತಿಸುವುದಾಗಿ ಈಗಾಗಲೇ ಪಕ್ಷದ ಹಿರಿಯ ಮುಖಂಡರು ಹೇಳಿದ್ದು, ಪಕ್ಷದ ಮುಖಂಡರ ನಿಲುವಿಗೆ ನಮ್ಮ‌ ಸಹಮತ ಇರುವುದಾಗಿ ಮಾಜಿ‌ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಕುಂದಾಪುರ ಭಾಗದಲ್ಲಿ ಕಾಂಗ್ರೆಸ್‌ ಪಕ್ಷ ಬಲಪಡಿಸುತ್ತಿರುವ ಕಾಂಗ್ರೆಸ್ ಮುಖಂಡ ದಿ‌ನೇಶ್ ಹೆಗ್ಡೆ ಮೊಳಹಳ್ಳಿ ಜಂಟಿ ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

Coastal Congress Leaders Decide To Support Jayaprakash Hegde

ಮಾಜಿ‌ ಸಂಸದರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆಯವರು ಮರಳಿ ಕಾಗ್ರೆಸ್ ಪಕ್ಷ‌ ಸೇರ್ಪಡೆಯಾಗುವ ಕುರಿತು ಈಗಾಗಲೇ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಯುತ್ತಿರುವ ಬಗ್ಗೆ ಮಾಹಿತಿಗಳಿದ್ದು, ಹಿಂದೆ ಕಾಂಗ್ರೆಸ್ ಪಕ್ಷದ ಸಂಸದರಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ‌ ವಿಶ್ವಾಸವನ್ನು ಗಳಿಸಿಕೊಂಡಿದ್ದ ಅವರು, ಮರಳಿ ಕಾಂಗ್ರೆಸ್‌ ಪಕ್ಷವನ್ನು ಸೇರುವುದಿದ್ದಲ್ಲಿ ನಾವು ಸ್ವಾಗತಿಸುತ್ತೇವೆ ಎಂದರು.

ಕಾಂಗ್ರೆಸ್ ಪಕ್ಷದೊಂದಿಗೆ ಅಪರಿಮಿತ ಸಂಬಂಧಗಳನ್ನು‌ ಹೊಂದಿರುವ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಹೈಕಮಾಂಡ್ ಯಾರೇ ಅಭ್ಯರ್ಥಿಗಳನ್ನು‌ ಘೋಷಣೆ ಮಾಡಿದರೂ, ಪಕ್ಷದ ನಿಷ್ಠಾವಂತ‌ ಕಾರ್ಯಕರ್ತರುಗಳಾದ ನಾವುಗಳು ಅಭ್ಯರ್ಥಿಯ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತರು ಗೋ ಬ್ಯಾಕ್‌ ಅಭಿಯಾನ

ಸದ್ಯ ಬಿಜೆಪಿಯಲ್ಲಿರುವ ಜಯಪ್ರಕಾಶ್‌ ಹೆಗ್ಡೆ ಇನ್ನು ಒಂದು ವಾರದಲ್ಲಿ ತಮ್ಮ ಮುಂದಿನ ರಾಜಕೀಯ ನಡೆ ತಿಳಿಸುವುದಾಗಿ ಹೇಳಿದ್ದರು. ಈ ನಡುವೆ ಜಯಪ್ರಕಾಶ್‌ ಹೆಗ್ಡೆ ಮತ್ತೆ ಕಾಂಗ್ರೆಸ್‌ ಸೇರುವುದು ಬೇಡ, ಅವರಿಗೆ ಉಡುಪಿ-ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವುದು ಬೇಡ ಎಂದು ಚಿಕ್ಕಮಗಳೂರು ಕಾಂಗ್ರೆಸ್‌ ಕಾರ್ಯಕರ್ತರು ಗೋ ಬ್ಯಾಕ್‌ ಅಭಿಯಾನ ನಡೆಸಿದ್ದಾರೆ.

ಕಷ್ಟ ಕಾಲದಲ್ಲಿ ಪಕ್ಷಕ್ಕೆ ಕೈ ಕೊಟ್ಟವರು ಈಗ ಬೇಡ, ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಕೊಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಹೆಗ್ಡೆ ಅಭಿಯಾನವನ್ನು ನಡೆಸಿದ್ದಾರೆ. ಅಲ್ಲದೇ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹೊರ ಹಾಕಿದ್ದಾರೆ. ಲೋಕಸಭಾ ಚುನಾವಣೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಜಯಪ್ರಕಾಶ್ ಹೆಗ್ಡೆ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಭಿಯಾನ ಶುರುಮಾಡಲಾಗಿದ್ದು, ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+