ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 24ರವರೆಗೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಸೂಚನೆ

|
Google Oneindia Kannada News

ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಈ ವಾರದ ಕೊನೆಯವರೆಗೂ ಮಳೆ ದಿನಗಳು ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಕಾರಣವಾಗಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದೆ.

ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 20-24ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಜುಲೈ 7ರ ನಂತರ ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿತ್ತು. ಮುಂದೆ ಓದಿ...

ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ

ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿ ಪ್ರಭಾವ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಗೋಚರಿಸಲಿದ್ದು, ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ. ಜುಲೈ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಆನಂತರ ಮಳೆ ಕ್ಷೀಣಿಸಬಹುದು ಎಂದು ಇಲಾಖೆ ಅಂದಾಜಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.

ಯೆಲ್ಲೋ ಅಲರ್ಟ್ ಘೋಷಣೆ

ಯೆಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದು, ಜುಲೈ 22ರವರೆಗೂ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಸುಳ್ಯ, ಉಪ್ಪಿನಂಗಡಿ, ಮೂಡುಬಿದಿರೆ, ಬೆಳ್ತಂಗಡಿ, ಕಾರವಾರ, ಪಣಂಬೂರು, ಕದ್ರ, ಹೊಳೆ ಹೊನ್ನೂರು, ಲಿಂಗನಮಕ್ಕಿ, ಶಿವಮೊಗ್ಗದಲ್ಲಿ ಮಳೆಯಾಗಿದೆ.

ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆ ಸಾಧ್ಯತೆರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆ ಸಾಧ್ಯತೆ

ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ

ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ

ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮಳೆ ಕೊಂಚ ಬಿಡುವು ನೀಡಿದೆ. ನದಿಗಳ ನೀರಿನ ಮಟ್ಟ ತಗ್ಗಿಲ್ಲದ್ದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ.
ಕಾವೇರಿ ಕಣಿವೆಯ ಹಾರಂಗಿ 9393, ಹೇಮಾವತಿ 8582, ಕೆಆರ್‌ಎಸ್ 13,892, ಕಬಿನಿ ಜಲಾಶಯಕ್ಕೆ 9262 ಕ್ಯುಸೆಕ್ ಒಳಹರಿವು ದಾಖಲಾಗಿದೆ.

ಆಂಧ್ರದ ಕರಾವಳಿ ಪ್ರದೇಶಗಳಲ್ಲೂ ಅಲರ್ಟ್

ಆಂಧ್ರದ ಕರಾವಳಿ ಪ್ರದೇಶಗಳಲ್ಲೂ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ಒತ್ತಡ ಸೃಷ್ಟಿಯಾಗಿರುವುದರಿಂದ ಆಂಧ್ರಪ್ರದೇಶದ ಕರಾವಳಿ ಪ್ರದೇಶದಲ್ಲಿ ಅಧಿಕ ಗಾಳಿಯೊಂದಿಗೆ ಮಿಂಚುಗುಡುಗು ಸಹಿತ ಮಳೆಯಾಗುವ ಸೂಚನೆ ನೀಡಲಾಗಿತ್ತು. ಇದರೊಂದಿಗೆ ಮಹಾರಾಷ್ಟ್ರದ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳ ಕಾಲ ಭಾರೀ ಎಂದರೆ, ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಮಹಾರಾಷ್ಟ್ರದ ಪುಣೆ, ರಾಯಗಡ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ರವಾನಿಸಲಾಗಿದೆ.

English summary
A low-pressure area is very likely to form over Northwest Bay of Bengal on July 23. Under this influence, coastal areas in the state are very likely to experience widespread rainfall from July 20-24,” says CS Patil, Director at IMD Bengaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X