ಈ ಭಾಗಕ್ಕೆ ಪಾಕಿಸ್ತಾನದ ನಂಟು: ಆರ್ ಅಶೋಕ್ ಸ್ಪೋಟಕ ಹೇಳಿಕೆ
ಬೆಂಗಳೂರು, ಮೇ 9: ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸ್ಪೋಟಕ ಹೇಳಿದ್ದಾರೆ.
ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ, ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ.
ಸ್ಪೀಕರ್ ಯು.ಟಿ.ಖಾದರ್ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ. ಸ್ಪೀಕರ್ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವವರಿಗೆ ಆಪರೇಶನ್ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.
ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯದಿಂದ ವಾಪಸ್ ಕಳಿಸಲು ಮನವಿ
ಪಾಕಿಸ್ತಾನದ ಪ್ರಜೆಗಳನ್ನು ರಾಜ್ಯದಿಂದ ವಾಪಸ್ ಕಳಿಸಬೇಕೆಂದು ರಾಜ್ಯ ಸರಕಾರಕ್ಕೆ ಸೂಚನೆ ನೀಡಬೇಕೆಂದು ಮಾನ್ಯ ರಾಜ್ಯಪಾಲರಿಗೆ ಇಂದು ಬಿಜೆಪಿ ನಿಯೋಗವು ಮನವಿ ಸಲ್ಲಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದ ಬಿಜೆಪಿ ನಿಯೋಗವು ಈ ಕುರಿತಂತೆ ಸಂಗ್ರಹಿತ ಸಹಿಗಳುಳ್ಳ ಮನವಿಯನ್ನು ಸಲ್ಲಿಸಿತು. ಬಿಜೆಪಿ ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ಸಹಿ ಸಂಗ್ರಹ ಅಭಿಯಾನವನ್ನೂ ಆಯೋಜಿಸಿತ್ತು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ವೇದವ್ಯಾಸ ಕಾಮತ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಪ್ರತಾಪಸಿಂಹ ನಾಯಕ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರೀ, ಹಾಲು ಉತ್ಪಾದಕರ ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಳೂರು ರಾಘವೇಂದ್ರ ಶೆಟ್ಟಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ ಕುಮಾರ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ.ಬಿ. ಶಶಿಧರ್, ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟದ ರಾಜ್ಯ ಸಂಚಾಲಕ ವಿಜಯ್ ಕುಮಾರ್, ರಾಜ್ಯ ಮಾಧ್ಯಮ ಸಹ-ಸಂಚಾಲಕ ಪ್ರಶಾಂತ್ ಕೆಡಂಜಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications