7th pay commission: ನೀತಿ ಸಂಹಿತೆ, ಆರ್ಥಿಕ ಬಿಕ್ಕಟ್ಟು...7ನೇ ವೇತನ ಆಯೋಗದ ವರದಿ ಜಾರಿಗೆ ನಿಧಾನಗತಿ
ಬೆಂಗಳೂರು, ಮೇ. 14 : ಕೆ.ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗ ವರದಿಯನ್ನು ಸಿದ್ಧಪಡಿಸಿ ಮಾರ್ಚ್ 16 ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ, ಆದಾದ ಒಂದು ದಿನದ ನಂತರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ನೌಕರರು ಮತ್ತೆ ವರದಿ ಅನುಷ್ಠಾನಕ್ಕಾಗಿ ಕಾದು ಕುಳಿತಿದ್ದಾರೆ.
ಇನ್ನೇನು ಈಗ ವರದಿ ಜಾರಿಯಾಗುತ್ತೆ.. ಆಗ ಜಾರಿಯಾಗುತ್ತೆ ಎಂದು ಕಾದು ಕುಳಿತಿದ್ದೆ ಆಯಿತು. ವೇತನ ಆಯೋಗದ ವರದಿ ಮಾತ್ರ ಜಾರಿ ಬಂದು ಸರ್ಕಾರಿ ನೌಕರರ ಕನಸು ನನಸಾಗಿಲ್ಲ. ಆದರೆ, ಈಗ ನೀತಿ ಸಂಹಿತೆ, ಗ್ಯಾರಂಟಿ ಯೋಜನೆಗಳು, ಆರ್ಥಿಕ ಬಿಕ್ಕಟ್ಟುಗಳಿಂದ ಸರ್ಕಾರ 7ನೇ ವೇತನ ಆಯೋಗ ವರದಿಯನ್ನು ಜಾರಿಗೆ ತರಲು ನಿಧಾನಗತಿಯನ್ನು ಅನುಸರಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ವರದಿ ಜಾರಿಗೆ ಸರ್ಕಾರದ ನಿಧಾನಗತಿ
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿಯೇ ವೇತನ ಆಯೋಗದ ಬಗ್ಗೆ ಚಿಕ್ಕದಾಗಿ ಹೇಳಿ ಮುಗಿಸಿದ್ದರು. ಇದಾದ ನಂತರ ರಾಜ್ಯ ಸರ್ಕಾರಿ ನೌಕರರ ಸಂಘ ದೊಡ್ಡ ಮಟ್ಟದಲ್ಲಿ ಸಮಾವೇಶ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಿತ್ತು. ಅಂದೂ ಕೂಡ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ಬರಿ ಭರವಸೆ ನೀಡಿ, ಘೋಷಣೆಯನ್ನು ಹಾಗೆ ಉಳಿಸಿಕೊಂಡಿದ್ದರು. ಅದಕ್ಕೆ ತಕ್ಕಂತೆ ಲೋಕಸಭಾ ಚುನಾವಣೆ ಎದುರಾಯಿತು.
ಸರ್ಕಾರಿ ನೌಕರರ ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿ, ರಾಜ್ಯದ 7ನೇ ವೇತನ ಆಯೋಗವು ಮಾರ್ಚ್ 16 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ಕೂಡ ಕೊಟ್ಟಿದ್ದಾರೆ. ಆದರೆ, ಅದು ಈಗಲೇ ಜಾರಿಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.
ಜೂನ್ 12ರ ತನಕ ಜಾರಿಯಾಗಲ್ಲ ವೇತನ ಆಯೋಗದ ವರದಿ
ದೇಶದಲ್ಲಿ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದು ಚುನಾವಣೆ ಮುಗಿದಿದೆ. ಆದರೆ, ಜೂನ್ 6 ರ ತನಕ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಇದಲ್ಲದೆ, ಜೂನ್ 12 ರ ತನಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಕಾರಣ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಹೀಗಾಗಿ ವೇತನ ಆಯೋಗದ ವರದಿ ಜಾರಿಗೆ ಯಾವುದೇ ಅವಲಾಶವಿಲ್ಲ. ನೀತಿ ಸಂಹಿತೆ ಸಡಿಲಗೊಳಿಸುವಂತೆ ಕೋರಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರವನ್ನು ಬರೆದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಇನ್ನು ಬಂದಿಲ್ಲ.

ಸರ್ಕಾರಕ್ಕೆ ಆರ್ಥಿಕ ಹೊರೆ
ಏಳನೇ ವೇತನ ಆಯೋಗದ ವರದಿ ಜಾರಿಯಾದರೇ 17 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ. ನೌಕರರ ವೇತನ ಹೆಚ್ಚಳವಾದರೆ ಸರ್ಕಾರದ ಬೊಕಸಕ್ಕೆ ಹೊರೆಯಾಗಲಿದೆ. ಈ ನಿಟ್ಟಿನಲ್ಲಿಯೂ ಸರ್ಕಾರ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಗ್ಯಾರಂಟಿಗಳನ್ನು ಘೋಷಿಸಿದ್ದ ಸರ್ಕಾರ ಅವುಗಳ ಅನುಷ್ಠಾನಕ್ಕೆ ಕೋಟ್ಯಾಂತರ ರೂಪಾಯಿ ಮೀಸಲಿಡುತ್ತಿದೆ. ಹೀಗಾಗಿ ವೇತನ ಆಯೋಗದ ಜಾರಿ ವಿಚಾರದಲ್ಲಿ ನಿಧಾನಗತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಇತ್ತ, ಏಳನೇ ವೇತನ ಆಯೋಗದ ವರದಿಯನ್ನು ಆರ್ಥಿಕ ಇಲಾಖೆ ಇನ್ನೂ ಪರಿಶೀಲಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದೂ ಕೂಡ ವರದಿ ಅನುಷ್ಠಾನದ ನಿಧಾನಗತಿಗೆ ಕೊಡುಗೆ ನೀಡುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications