ಚುನಾವಣಾ ನೀತಿ ಸಂಹಿತೆ: ಶಿಕ್ಷಕರ ವರ್ಗಾವಣೆ ಮುಂದೂಡಿಕೆ
ಬೆಂಗಳೂರು, ಸೆಪ್ಟೆಂಬರ್ 24: ಉಪಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿ ಆಗಿರುವ ಕಾರಣ ಶಿಕ್ಷಕರ ವರ್ಗಾವಣೆ ಕೌನ್ಸಿಲ್ ಸಹ ಮುಂದೂಡಲ್ಪಟ್ಟಿದೆ.
ಈಗಾಗಲೇ ಕೆಲವರಿಗೆ ವರ್ಗಾವಣೆ ಕೌನ್ಸಿಲ್ ಮುಗಿದಿದ್ದು, ಅವರಿಗೆ ಮೂವ್‌ಮೆಂಟ್ ಆದೇಶ ಸಹ ನೀಡಲಾಗಿದೆ. ಆದೆ ಇದರ ವಿರುದ್ಧ ಕೆಲವರು ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆ ಗುರುವಾರಕ್ಕೆ ಮುಂದೂಡಲಾಗಿದೆ.
ವರ್ಗಾವಣೆ ಪ್ರಕ್ರಿಯೆ ಶೀಘ್ರವಾಗಿ ಮುಗಿಸಲು ಲಿಖಿತ ಒಪ್ಪಿಗೆ ನೀಡುವಂತೆ ಶಿಕ್ಷಣ ಇಲಾಖೆ ಆಯುಕ್ತ ಕೆ.ಜಿ.ಜಗದೀಶ್ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಆದರೆ ಆಯೋಗದಿಂದ ಯಾವುದೇ ಪ್ರತಿಕ್ರಿಯೆ ಈವರೆಗೆ ದೊರೆತಿಲ್ಲ. ಅನುಮತಿ ಸಿಗುವವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಅನಿರ್ದಿಷ್ಟಾವದಿಗಳ ಕಾಲ ಮುಂದೂಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣ ಅವರು ಸಹ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದು, ಈಗಾಗಲೇ 70% ವರ್ಗಾವಣೆ ಮುಗಿದಿದೆ. ಉಳಿದ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅವಕಾಶ ಕೊಡಬೇಕೆಂದು ಮನವಿ ಮಾಡಿದ್ದಾರೆ.
ವರ್ಗಾವಣೆ ಪ್ರಕ್ರಿಯೆ ಮುಂದುವರೆಕಿ ಅಥವಾ ತಡೆಯ ಬಗ್ಗೆ ಚುನಾವಣಾ ಆಯೋಗ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಇಂದು ಅಥವಾ ನಾಳೆ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ.












Click it and Unblock the Notifications