Cold Alert: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ, ನಾಳೆಯಿಂದ ಮಳೆ: ಐಎಂಡಿ ವರದಿ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಇನ್ನು ಮೂರು ದಿನಗಳಲ್ಲಿ ಚಳಿ ಇನ್ನಷ್ಟು ಇಳಿಕೆಯಾಗಲಿದ್ದು, ಜನವರಿ 9ರಿಂದ ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆರ್ಭಟವೂ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಕನಿಷ್ಠ ತಾಪಮಾನವು ಇಳಿಕೆಯಾಗುತ್ತಿದ್ದು, ಬೀದರ್‌ನಲ್ಲಿ ಶೀತಅಲೆ ಕಾಣಿಸಿಕೊಂಡಿದೆ. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತಲೂ 2-5 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದೆ. ಇನ್ನು ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಶೀತಗಾಳಿ ಹಾಗೂ ಮೋಡ ಕವಿದ ವಾತಾವರಣ ಮುಂದುವರಿದಿದೆ. ಜನವರಿ 9ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ ಇರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ರಾಜ್ಯದಲ್ಲಿ ಚಳಿ ಹಾಗೂ ಮಳೆ ಹೆಚ್ಚಾಗುವುದಕ್ಕೆ ಕಾರಣವಾಗಿದೆ. ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತಿ ಕನಿಷ್ಠ ತಾಪಮಾನವು 9.5 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿದೆ.
ಶುಕ್ರವಾರದಿಂದ ಮಳೆ ಆರ್ಭಟ
ಇನ್ನು ಶುಕ್ರವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆಗುವ ನಿರೀಕ್ಷೆ ಇದೆ. ಎಲ್ಲೆಲ್ಲಿ ಹಾಗೂ ಯಾವಾಗ ಮಳೆ ಆಗಲಿದೆ ಎನ್ನುವ ವಿವರ ಇಲ್ಲಿದೆ.
ಜನವರಿ 9: ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ಬಹುತೇಕ ಒಣಹವೆ ಮುಂದುವರಿಯಲಿದೆ.
ಜನವರಿ 10: ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಜನವರಿ 11: ಚಾಮರಾಜನಗರ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಆಗಲಿದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಹವಾಮಾನ ಹೇಗಿದೆ
ಆಗ್ನೇಯ ಬಂಗಾಳಕೊಲ್ಲಿ ಮತ್ತು ಪಕ್ಕದ ಪೂರ್ವ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ.
1. ಪೂರ್ವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪ್ರಸರಣ ಕಡಿಮೆಯಾಗಿದೆ.
2. ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪ್ರಸರಣ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.












Click it and Unblock the Notifications