ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಲವಂತವಾಗಿ ಮಕ್ಕಳ ದಾಖಲಾತಿ ಪ್ರಕ್ರಿಯೆ: ಮುಂದೆ ಏನಾಗುತ್ತೆ?

|
Google Oneindia Kannada News

ಬೆಂಗಳೂರು, ಜು. 06: ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ನಡುವಿನ ಶೀತಲ ಸಮರ ಮುಂದುವರೆದಿದೆ. ಆ. 30 ರ ವರೆಗೂ ದಾಖಲಾತಿಗೆ ಅವಕಾಶ ನೀಡಿದ್ದರೂ, ಶಿಕ್ಷಣ ಇಲಾಖೆ ಬಲವಂತವಾಗಿ ದಾಖಲಾತಿ ಪ್ರತಿಕ್ರಿಯೆಯನ್ನು 'SATS' ನಲ್ಲಿ ಪೂರ್ಣಗೊಳಿಸುತ್ತಿದ್ದಾರೆ. ಹೈಕೋರ್ಟ್ ಚಾಟಿ ಬೀಸಿರುವ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಮೇಲೆ ಒತ್ತಡ ಹಾಕಿ ಶಿಕ್ಷಣ ಇಲಾಖೆ ಅಧಿಕಾರಿಗಳು ಬಲವಂತವಾಗಿ ದಾಖಲಾತಿ ಪ್ರತಿಕ್ರಿಯೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಇದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ: ಕೊರೊನಾ ಹಿನ್ನೆಲೆಯಲ್ಲಿ ನಾನಾ ಕಾರಣದಿಂದ ವಿದ್ಯಾರ್ಥಿಗಳು ದಾಖಲಾತಿಯೇ ಆಗಿಲ್ಲ. ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆ ಆಗಿರುವ ಬಗ್ಗೆ ಕಿಡಿ ಕಾರಿದ್ದ ಹೈಕೋರ್ಟ್ ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳನ್ನು ಕಡ್ಡಾಯ ಶಿಕ್ಷಣಕ್ಕೆ ಒಳಪಡಿಸಿ ವರದಿ ನೀಡುವಂತೆ ಸೂಚಿಸಿತ್ತು.

ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ತರಾತುರಿಯಲ್ಲಿ ಶಾಲಾ ದಾಖಲಾತಿ ಪ್ರಕ್ರಿಯೆಯಲ್ಲಿ ಎಡವಟ್ಟು ಮಾಡುತ್ತಿದ್ದಾರೆ. ನ್ಯಾಯಾಲಯಕ್ಕೆ ಸುಳ್ಳು ಲೆಕ್ಕ ತೋರಿಸುವ ಉದ್ದೇಶದಿಂದ ಶಾಲೆಯಿಂದ ಹೊರಗೆ ಇರುವ ಮಕ್ಕಳನ್ನು ಸರ್ಕಾರದ ಲೆಕ್ಕದಲ್ಲಿ ದಾಖಲಾತಿ ಪ್ರಕ್ರಿಮೆ ಮುಗಿಸಿದಂತೆ ಲೆಕ್ಕ ತೋರಿಸುತ್ತಿದ್ದಾರೆ. ಮಾತ್ರವಲ್ಲ ಖಾಸಗಿ ಶಾಲೆಗಳ ಮೇಲೆ ಒತ್ತಡ ಹಾಕಿ ಬಲವಂತವಾಗಿ ದಾಖಲಾತಿ ಪ್ರಕ್ರಿಯೆ ಮಾಡುತ್ತಿದ್ದಾರೆ. ಇದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. '

Cold War Between Private Schools and Education Dept

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಗಸ್ಟ್ 30 ರ ವರೆಗೂ ದಾಖಲಾತಿ ಪ್ರಕ್ರಿಯಗೆ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಬಹುತೇಕ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಪೋಷಕರು ಸ್ವಯಂ ಪ್ರೇರಿತವಾಗಿ ತಮ್ಮ ಮಕ್ಕಳನ್ನು ದಾಖಲಾತಿ ಮಾಡಲು ಇನ್ನೂ ಕಾಲಾವಕಾಶವಿದೆ.

ಕಳೆದ ವರ್ಷ ಕೊರೊನಾ ಸಂಕಷ್ಟದಿಂದಾಗಿ ಸಾಕಷ್ಟು ವಿದ್ಯಾರ್ಥಿಗಳು ಶಾಲೆಗಳಿಗೆ ದಾಖಲಾತಿಯೇ ಆಗಿಲ್ಲ. ಅಂತಹ ಮಕ್ಕಳು ಈಗ ಎಲ್ಲಿದ್ದಾರೋ ಗೊತ್ತಿಲ್ಲ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಬಲವಂತವಾಗಿ SATS ನಲ್ಲಿ ದಾಖಲಾತಿ ಪ್ರಕ್ರಿಯೆ ಮಾಡಿಸುತ್ತಿದ್ದಾರೆ. ಜು. 06 ಡೆಡ್ ಲೈನ್ ನಿಗದಿ ಮಾಡಲಾಗಿದೆ. ಈ ಮೂಲಕ ಖಾಸಗಿ ಶಾಲಾ ಸಂಸ್ಥೆಗಳ ಮೇಲೆ ಶಿಕ್ಷಣ ಇಲಾಖೆ ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

Recommended Video

Shivarajkumar Biography | ಶಿವರಾಜ್ ಕುಮಾರ್ ಹುಟ್ಟಿದ ದಿನ ಅಣ್ಣಾವ್ರು ಏನ್ ಮಾಡಿದ್ರು ಗೊತ್ತಾ? | Oneindia

ಬಲವಂತವಾಗಿ ದಾಖಲಾತಿ ಕಾರ್ಯ: ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗೆ ಉಳಿದಿದ್ದಾರೆ. ಆದರೆ, ಎಲ್ಲಾ ವಿದ್ಯಾರ್ಥಿಗಳು ಶಾಲೆಗಳಲ್ಲಿ ಓದುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಹುನ್ನಾರ ನಡೆಯುತ್ತಿದೆ. ಶಾಲಾ ಮಕ್ಕಳನ್ನು ಪೋಷಕರು ದಾಖಲಾತಿ ಮಾಡಿಸಿ ಶಿಕ್ಷಣ ಕೊಡಿಸದ ಹೊರತು ನಾವು ದಾಖಲಾತಿ ಪ್ರಕ್ರಿಯೆ ಮಾಡಲು ಅಸಾಧ್ಯ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆದರಿಕೆ ಹಾಕಿ ಶಾಲೆಯಿಂದ ಹೊರಗೆ ಉಳಿದಿರುವ ಮಕ್ಕಳನ್ನು ಸಹ ದಾಖಲಾತಿ ಪೂರ್ಣವಾದಂತೆ ತೋರಿಸುತ್ತಿದ್ದಾರೆ. ಶಿಕ್ಷಣ ಇಲಾಖೆ ಈ ನಡೆ ಖಂಡನೀಯ ಎಂದು ಕ್ಯಾಮ್ಸ್ ಅದ್ಯಕ್ಷ ಎಂ.ಎ. ಆನಂದ್ ಆಗ್ರಹಿಸಿದ್ದಾರೆ.

English summary
The Cold War has begins between private schools and the Department of Education regarding the enrollment process of children remaining out of school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X