Karnataka Weather: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೂರು ದಿನ ಉತ್ತಮ ಮಳೆ ಸಾಧ್ಯತೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಮುಂದುವರೆದಿದೆ. ಅದರಲ್ಲೂ ಉತ್ತರ ಒಳನಾಡಿನ ಭಾಗದಲ್ಲಿ ಭಾರೀ ಶೀತಗಾಳಿಗೆ ಜನರು ದಂಗಾಗಿದ್ದಾರೆ. ಈ ನಡುವೆಯೇ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಇಂದು (ಜನವರಿ 1) ಬೆಳಗ್ಗೆ ದಟ್ಟ ಮಂಜು, ಚಳಿ ನಡುವೆ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ 2025ರ ವರ್ಷಾಂತ್ಯ ಡಿಸೆಂಬರ್ 31ರಂದು ನಗರದ ಹಲವೆಡೆ ಉತ್ತಮ ಮಳೆಯಾಗಿದ್ದು, ಹೊಸವರ್ಷ ಸಂಭ್ರಮಾಚರಣೆಗೆ ಅಡ್ಡಿಗೆಯಾಗಿದೆ. ಇನಗನೂ ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಹವಾಮಾನ: ಮತ್ತೊಂದೆಡೆ, ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಚಳಿ ಪ್ರಮಾಣ ಕಡಿಮೆ ಆಗಿದ್ದು, ತಾಪಮಾನದಲ್ಲಿ ಏರಿಕೆ ಕಂಡುಬಂದಿದಿದೆ. ಇನ್ನೂ ಮುಂದಿನ ಹಲವು ದಿನಗಳವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಉತ್ತಮ ಮಳೆ ಸಾಧ್ಯತೆ: ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಉತ್ತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಚಳಿಗಾಳಿ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಉಳಿದಂತೆ ಕರವಾಳಿ ಕರ್ನಾಟಕ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚಳಿ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಭೀಕರ ಚಳಿ: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚಳಿ ಮುಂದುವರೆಯಲಿದೆ. ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭೀಕರ ಚಳಿ ಇರಲಿದೆ ಎಂದು ತಿಳಿಸಿದೆ. ಅದರಲ್ಲೂ ಬೀದರ್, ರಾಯಚೂರು, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ತುಸು ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ.
ಇದೀಗ ಹಲವೆಡೆ ಚಳಿ ಪ್ರಮಾಣ ತಗ್ಗಿದ್ದು, ತಾಪಮಾನದಲ್ಲಿ ನಿಧಾನವಾಗಿ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಬಹುತೇಕ ಭಾಗಗಳಲ್ಲಿ ಚಳಿ ಪ್ರಮಾಣ ತಗ್ಗಲಿದ್ದು, ಶಿವರಾತ್ರಿ ವೇಳೆಗೆ ಸಂಪೂರ್ಣವಾಗಿ ಕಡಿಮೆಯಾಗಿ ಬೇಸಿಗೆ ಎಂಟ್ರಿ ಕೊಡಲಿದೆ. ಈ ನಡುವೆಯೇ ಕೆಲವೆಡೆ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಕಳೆ ವರ್ಷ ಅಂದರೆ 2025ರಲ್ಲಿ ಮುಂಗಾರು ಜೂನ್ ಆರಂಭದಲ್ಲೇ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ರಣಮಳೆ ಸುರಿದಿದೆ. ಪರಿಣಾಮ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದಿವೆ. ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದೆ. ಈ ಬಾರಿಯೂ ಕೂಡ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.












Click it and Unblock the Notifications