ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಇಲ್ಲ!

By Nayana
|
Google Oneindia Kannada News

ಬೆಂಗಳೂರು, ಜೂನ್ 6: ಈ ಸಾಲಿನಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್ ನೀಡಲಾಗುತ್ತಿಲ್ಲ, ಕೇವಲ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ಹೊರತುಪಡಿಸಿ ಉಳಿದವರು ನಿಗದಿತ ಶುಲ್ಕ ಪಾವತಿಸಿ ಪಾಸ್‌ಗಳನ್ನು ಪಡೆಯಬೇಕಿದೆ.

ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಮಾತ್ರ ಉಚಿತವಾಗಿ ಬಸ್ ಪಾಸ್‌ಗಳನ್ನು ವಿತರಿಸಿತ್ತು. ಇದಕ್ಕೆ ಇತರೆ ವರ್ಗದವರಿಂದ ವಿರೋಧ ವ್ಯಕ್ತವಾಗಿತ್ತು. ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ ಪಾಸ್‌ಗಳನ್ನು ಪದಗಿಸಬೇಕೆಂಬ ಕೂಗು ಕೇಳಿಬಂತು.

ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈ ಹಿನ್ನೆಲೆಯಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯಾವರು ಪ್ರಸ್ತುತ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಎಲ್ಲ 19.60ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ ಪಾಸ್‌ಗಳನ್ನು ವಿತರಿಸುವುದಾಗಿ ಘೋಷಿಸುವುದಾಗಿ ಘೋಷಿಸಿದ್ದರು. ಆದರೆ ಈ ಸಂಬಂಧ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ.

Collation government modifies free bus pass notification

ಸರ್ಕಾರದಿಂದ ಸಾರಿಗೆ ಸಂಸ್ಥೆಗಳಿಗೆ ಉಚಿತವಾಗಿ ಬಸ್ ಪಾಸ್ ವಿತರಿಸುವ ಸಂಬಂಧ ಯಾವುದೇ ಆದೇಶ ಬಂದಿಲ್ಲ, ಸದ್ಯ ಹೊಸ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ಶೀಘ್ರವೇ ಈ ಬಗ್ಗೆ ನಿರ್ದಾರ ಕೈಗೊಳ್ಳಲಿದ್ದಾರೆ ಎಂಬ ಪ್ರತಿಕ್ರಿಯೆ ಬಂದಿದೆ. 1ರಿಂದ 10ನೇ ತರಗತಿಯವರೆಗಿನ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಜೂನ್‌ 7ರಿಂದ ಬಸ್ ಪಾಸ್ ವಿತರಿಸಲಾಗುತ್ತದೆ.

English summary
SFree bus pass for all caste students which was issued by earlier Congress government was withdrawn by new collation government restricting free bus pass only for scheduled caste and tribe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X