ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 13ಕ್ಕೆ ಸಮ್ಮಿಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆ

By Nayana
|
Google Oneindia Kannada News

ಬೆಂಗಳೂರು, ಜೂನ್ 7: ರಾಜ್ಯ ಸರ್ಕಾರದ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆದಿದೆ. ಜೆಡಿಎಸ್‌ನ 8 ಶಾಸಕರು, ಕಾಂಗ್ರೆಸ್‌ನ 16 ಮಂದಿ ಶಾಸಕರು ಹಾಗೂ ಒಬ್ಬ ಪಕ್ಷೇತರ ಶಾಸಕ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯ

ಇದೀಗ ಸಮ್ಮಿಶ್ರ ಸರ್ಕಾರದ ಮೊದಲ ಸಮಿತಿ ಸಭೆಯೂ ನಿಗದಿಯಾಗಿದೆ. ಜೂನ್.13ರಂದು ಕಾಂಗ್ರೆಸ್‌-ಜೆಡಿಎಸ್ ಸಮನ್ವಯಸಮಿತಿ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಪಾಲ್ಗೊಳ್ಳಲಿದ್ದಾರೆ.

Collation govt coordination committee meet on June 13

ಎರಡೂ ಪಕ್ಷಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮ, ನಿಗಮ-ಮಂಡಳಿ ನೇಮಕದ ಬಗ್ಗೆ ಚರ್ಚೆ ನಡೆಯಲಿದೆ. ಸಮನ್ವಯ ಸಮಿತಿಯಲ್ಲಿ ಚರ್ಚಿಸಿದ ಬಳಿಕವೇ ಮಹತ್ವದ ನಿರ್ಧಾರಗಳು ಪ್ರಕಟಗೊಳ್ಳಲಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಹೊಸ ಯೋಜನೆಗಳ ಅನುಷ್ಠಾನ ಕುರಿತು ಪ್ರಶ್ನೆ ಮಾಡುವ ಕಾಲವೂ ಸನ್ನಿಹಿತವಾಗಲಿದೆ.

English summary
Coordination committee of JDS-Congress collation government led by former chief minister Siddaramaiah will meeton June 13 to discuss common minimum program.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X