College Holiday: 2025-26ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಎಷ್ಟು ದಿನ ರಜೆ?
College Holiday: ಈಗಾಗಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಗಿದಿದ್ದು, ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಫಲಿತಾಂಶ ಇನ್ನೂ ಬಾಕಿಯಿದೆ. ಇದರ ಬೆನ್ನಲ್ಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯು 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಾಗಾದ್ರೆ ವಿದ್ಯಾರ್ಥಿಗಳಿಗೆ ಎಷ್ಟು ದಿನ ರಜೆಗಳು ಸಿಗಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಾರ್ಚ್ 1ರಿಂದ 20ರ ವರೆಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 8ಕ್ಕೆ ಫಲಿತಾಂಶ ಬಿಡುಗಡೆಯಾಗಿತ್ತು. ಇದೀಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಟಕವಾಗುವ ಮುನ್ನವೇ ಪದವಿ ಪೂರ್ವ ಶಿಕ್ಷಣ ಇಲಾಖೆಯು 2025-26ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.

ವೇಳಾಪಟ್ಟಿ ಪ್ರಕಾರ, ಜೂನ್ 2ರಿಂದ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆಪ್ಟಂಬರ್ 21ರವರೆಗೆ ಹಾಗೂ ಎರಡನೇ ಅವಧಿ ಅಕ್ಟೋಬರ್ 8ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ.
ರಜಾ ದಿನಗಳ ಬಗ್ಗೆ ಮಾಹಿತಿ: ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಟಕ ಮಾಡಿದೆ. ಇದರಲ್ಲಿ ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅನ್ವಯವಾಗಲಿದೆ.
ಶೀಘ್ರವೇ 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯ ಆಗಲಿವೆ. ಈ ಹಿನ್ನೆಲೆ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ 2025 ಮೇ 29ರಿಂದ ಶಾಲೆ ಪ್ರಾರಂಭಿಸಲು ಸೂಚನೆ ನೀಡಿದೆ. ಅದರಂತೆಯೇ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯ ಆಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಲಾಗಿದೆ.
2025-26ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು: ಮೊದಲನೇ ಅವಧಿಯು 2025 ಮೇ 29ರಿಂದ ಸೆಪ್ಟೆಂಬರ್ 19ರ ವರೆಗೆ. ಎರಡನೇ ಅವಧಿಯು 2025 ಅಕ್ಟೋಬರ್ 8ರಿಂದ 2026 ಏಪ್ರಿಲ್ 10 ರವರೆಗೆ.
ದಸರಾ ರಜೆಯು 2025 ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರ ವರೆಗೆ. ಬೇಸಿಗೆ ರಜೆಯು 2026 ಏಪ್ರಿಲ್ 11 ರಿಂದ 2026 ಮೇ 5ರ ವರೆಗೆ ಇರಲಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 123 ರಜೆ ದಿನಗಳು ಇವೆ. ಉಳಿದಂತೆ 242 ದಿನ ಶಾಲೆಗಳು ತೆರೆಯಲಿವೆ. ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನ, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 4 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ಮೀಸಲಿಡಲಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications