• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯದಲ್ಲಿ ಆಫ್‌ಲೈನ್ ತರಗತಿಗಳು ಎಂದಿನಂತೆ ನಡೆಯಲಿವೆ: ಅಶ್ವತ್ಥ ನಾರಾಯಣ

|

ಬೆಂಗಳೂರು, ಮಾರ್ಚ್ 24: ಕರ್ನಾಟಕದಲ್ಲಿ ಆಫ್‌ಲೈನ್ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

   ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ, ತರಗತಿಗಳು ನಡೆಯಲಿವೆ- ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ್ ಮಾಹಿತಿ | Oneindia Kannada

   ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದೆ, ಆದ್ದರಿಂದ ಶಾಲೆ ಹಾಗೂ ಪರೀಕ್ಷೆಗಳನ್ನು ನಡೆಸಬೇಕೋ, ಬೇಡವೋ ಎನ್ನುವ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲದಲ್ಲಿದ್ದಾರೆ.

   ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ!

   ಇದಕ್ಕೆ ಅಶ್ವತ್ಥನಾರಾಯಣ ಅವರು ಪ್ರತಿಕ್ರಿಯಿಸಿದ್ದು, ಆಫ್‌ಲೈನ್ ತರಗತಿಗಳು ನಿಲ್ಲುವುದಿಲ್ಲ, ನಿಗದಿತ ಸಮಯದಲ್ಲೇ ಪರೀಕ್ಷೆಗಳು ಕೂಡ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

   ಈ ಸಂದರ್ಭದಲ್ಲಿ ಕೋವಿಡ್ 19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಹಾಗೂ ಮಹಾ ವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ ಎಂದರು.

   ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ವಿಭಾಗದ ಪರಿಸ್ಥಿತಿ ಅವಲೋಕನ ನಡೆಸಿ ಮಾತನಾಡಿ, ವಿವಿಧ ವಿಶ್ವವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ನಡೆಯಲಿವೆ.

   ಸರ್ಕಾರ ಹೊರಡಿಸಿರುವ ಮಾದರಿ ವೇಳಾಪಟ್ಟಿಯಂತೆ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ವೇಳಾಪಟ್ಟಿ ಅನುಸಾರ ಪ್ರಸ್ತುತ ನಡೆಯುತ್ತಿರುವ ಆಫ್‌ಲೈನ್ ತರಗತಿಗಳನ್ನು ಹಾಗೆಯೇ ಮುಂದುವರೆಸಲಾಗುವುದು ಎಂದು ಹೇಳಿದರು.

   ಕೊರೊನಾ ಎರಡನೇ ಅಲೆ ಶುರುವಾಗಿದ್ದು, ಮತ್ತೆ ಲಾಕ್‌ಡೌನ್ ವಿಧಿಸುವ ಸಾಧ್ಯತೆ ಇದೆ ಎನ್ನುವ ಗೊಂದಲವಿತ್ತು, ಆದರೆ ಇದೆಲ್ಲಕ್ಕೂ ಅಶ್ವತ್ಥ ನಾರಾಯಣ ತೆರೆ ಎಳೆದಿದ್ದಾರೆ.

   English summary
   The government of Karnataka has decided to not shut down the educational institutes in the states and conduct regular offline classes in colleges after reviewing the current Covid-19 situation, said Deputy Chief Minister C N Ashwath Narayan.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X