ಕರ್ನಾಟಕ; ಕಾಲೇಜುಗಳು ಆರಂಭ, ಮೊದಲ ದಿನ ಕಡಿಮೆ ಹಾಜರಾತಿ

ಬೆಂಗಳೂರು, ನವೆಂಬರ್ 17 : ಎಂಟು ತಿಂಗಳ ಬಳಿಕ ಕರ್ನಾಟಕದಲ್ಲಿ ಕಾಲೇಜುಗಳು ಆರಂಭವಾಗಿವೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ಆರಂಭವಾಗಿದ್ದು, ಮೊದಲ ದಿನ ಹಾಜರಾತಿ ಕಡಿಮೆ ಇತ್ತು.

ಕೋವಿಡ್ ಸಂದರ್ಭದಲ್ಲಿ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ಯುಜಿಸಿ ಪ್ರಕಟಿಸಿದೆ. ಅದರ ಅನ್ವಯ ಮಂಗಳವಾರ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದೆ.

ಸೋಮವಾರವೇ ಅಗತ್ಯ ಸುರಕ್ಷಾ ಕ್ರಮಗಳ ಬಗ್ಗೆ ಅಂತಿಮ ಹಂತದ ಪರಿಶೀಲನೆ ನಡೆಸಲಾಗಿತ್ತು. ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿತ್ತು. ಕೋವಿಡ್ ಪರೀಕ್ಷೆಗಾಗಿಯೇ ಸರ್ಕಾರಿ ಲ್ಯಾಬ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು.

Colleges Reopened In Karnataka With Thin Attendance

ಮಂಗಳವಾರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಬಹುದು. ವಿದ್ಯಾರ್ಥಿಗಳು ಪೋಷಕರಿಂದ ತರಗತಿಗೆ ಹಾಜರಾಗಲು ಒಪ್ಪಿಗೆ ಪತ್ರವನ್ನು ಸಹ ನೀಡಬೇಕಿದೆ.

ಕಾಲೇಜುಗಳು ಪುನರಾರಂಭವಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಬೆಂಗಳೂರಿನ ಶೇಷಾದ್ರಿಪುರಂನ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣೆ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾಲೇಜುಗಳು ಆರಂಭವಾಗಿದ್ದು, ಮೊದಲ ದಿನ ಹಾಜರಾತಿ ಕಡಿಮೆ ಇತ್ತು. ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿಯೇ ತರಗತಿಗಳು ನಡೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+