ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; ಕಾಲೇಜುಗಳು ಆರಂಭ, ಮೊದಲ ದಿನ ಕಡಿಮೆ ಹಾಜರಾತಿ

|
Google Oneindia Kannada News

ಬೆಂಗಳೂರು, ನವೆಂಬರ್ 17 : ಎಂಟು ತಿಂಗಳ ಬಳಿಕ ಕರ್ನಾಟಕದಲ್ಲಿ ಕಾಲೇಜುಗಳು ಆರಂಭವಾಗಿವೆ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳು ಆರಂಭವಾಗಿದ್ದು, ಮೊದಲ ದಿನ ಹಾಜರಾತಿ ಕಡಿಮೆ ಇತ್ತು.

ಕೋವಿಡ್ ಸಂದರ್ಭದಲ್ಲಿ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ಯುಜಿಸಿ ಪ್ರಕಟಿಸಿದೆ. ಅದರ ಅನ್ವಯ ಮಂಗಳವಾರ ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದೆ.

ಕಾಲೇಜು ಓಪನ್; ಕೋವಿಡ್ ಪರೀಕ್ಷೆ, ಸ್ಯಾನಿಟೈಸ್ಕಾಲೇಜು ಓಪನ್; ಕೋವಿಡ್ ಪರೀಕ್ಷೆ, ಸ್ಯಾನಿಟೈಸ್

ಸೋಮವಾರವೇ ಅಗತ್ಯ ಸುರಕ್ಷಾ ಕ್ರಮಗಳ ಬಗ್ಗೆ ಅಂತಿಮ ಹಂತದ ಪರಿಶೀಲನೆ ನಡೆಸಲಾಗಿತ್ತು. ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿತ್ತು. ಕೋವಿಡ್ ಪರೀಕ್ಷೆಗಾಗಿಯೇ ಸರ್ಕಾರಿ ಲ್ಯಾಬ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು.

 ಕಾಲೇಜು ಪುನರಾರಂಭ; ವಿದ್ಯಾರ್ಥಿಗಳಿಗೆ ಸಚಿವ ಸೋಮಶೇಖರ್ ಸಲಹೆ ಕಾಲೇಜು ಪುನರಾರಂಭ; ವಿದ್ಯಾರ್ಥಿಗಳಿಗೆ ಸಚಿವ ಸೋಮಶೇಖರ್ ಸಲಹೆ

Colleges Reopened In Karnataka With Thin Attendance

ಮಂಗಳವಾರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಬಂದ ವಿದ್ಯಾರ್ಥಿಗಳು ಮಾತ್ರ ತರಗತಿಗೆ ಹಾಜರಾಗಬಹುದು. ವಿದ್ಯಾರ್ಥಿಗಳು ಪೋಷಕರಿಂದ ತರಗತಿಗೆ ಹಾಜರಾಗಲು ಒಪ್ಪಿಗೆ ಪತ್ರವನ್ನು ಸಹ ನೀಡಬೇಕಿದೆ.

ತಮಿಳುನಾಡಿನಲ್ಲಿ ಶಾಲಾ-ಕಾಲೇಜು ತೆರೆಯುವುದಕ್ಕೆ ಸರ್ಕಾರದ ಬ್ರೇಕ್! ತಮಿಳುನಾಡಿನಲ್ಲಿ ಶಾಲಾ-ಕಾಲೇಜು ತೆರೆಯುವುದಕ್ಕೆ ಸರ್ಕಾರದ ಬ್ರೇಕ್!

ಕಾಲೇಜುಗಳು ಪುನರಾರಂಭವಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಬೆಂಗಳೂರಿನ ಶೇಷಾದ್ರಿಪುರಂನ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣೆ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು.

Recommended Video

ಎಷ್ಟ್ ದಿನ ಮೋಸ ಮಾಡ್ತಾರೋ ಮಾಡ್ಲಿ!! | Oneindia Kannada

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಾಲೇಜುಗಳು ಆರಂಭವಾಗಿದ್ದು, ಮೊದಲ ದಿನ ಹಾಜರಾತಿ ಕಡಿಮೆ ಇತ್ತು. ಅಂತಿಮ ಸೆಮಿಸ್ಟರ್ ಹೊರತುಪಡಿಸಿ ಉಳಿದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿಯೇ ತರಗತಿಗಳು ನಡೆಯಲಿವೆ.

English summary
With COVID-19 protocols in place several colleges in Karnataka reopened on November 17, 2018. After the 8 months colleges witnessed thin attendance on first day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X