ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ರಜೆ ಮುಗೀತು: ಅಕ್ಟೋಬರ್ 1 ರಿಂದ ಪದವಿ ಕಾಲೇಜು ಆರಂಭ

|
Google Oneindia Kannada News

ಬೆಂಗಳೂರು, ಆಗಸ್ಟ್ 26: ಕೊರೊನಾ ರಜೆ ಮುಗೀತು ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳನ್ನು ಪುನರಾರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

Recommended Video

ಇನ್ಮುಂದೆ ಈ ಏರಿಯಾ ವರೆಗೂ ಬರುತ್ತೆ ಮೆಟ್ರೋ | Oneindia Kannada

ಆದರೆ ಈ ಕುರಿತು ಸರ್ಕಾರದಿಂದ ಯಾವುದೇ ಅಧಿಕೃತ ಸುತ್ತೋಲೆ ಹೊರಡಿಸಿಲ್ಲ.ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸೆ. 1 ರಿಂದ ಆನ್ ಲೈನ್ ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ರವಾನಿಸಿದೆ ಎನ್ನಲಾಗಿದ್ದು, ಇನ್ನೂ, ಸರ್ಕಾರದ ಅಧಿಕೃತ ಆದೇಶ ಮಾತ್ರ ಬಾಕಿಯಿದೆ. ಆದರೆ ಸದ್ಯಕ್ಕೆ ಶಾಲೆ ಹಾಗೂ ಪಿಯುಸಿ ತರಗತಿಗಳು ತೆರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.

Colleges Would Begin Offline Classes From October 1 In Karnataka: DCM Ashwath Narayan

ಎಲ್ಲಾ ಸೆಮಿಸ್ಟರ್‌ಗಳಿಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ವಿದ್ಯಾರ್ಥಿ ಸಮುದಾಯ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

ಇದೇ ವೇಳೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲು ಸರ್ಕಾರ ತನ್ನ ವ್ಯಾಪ್ತಿಗೆ ಬಂದ ಶಿಕ್ಷಣ ಸಂಸ್ಥೆಗಳನ್ನು ಕೇಳಿಕೊಂಡಿತ್ತು. ವಿಶ್ವವಿದ್ಯಾನಿಲಯವು ಕಾನೂನು ಇಲಾಖೆ ಮತ್ತು ಬಾರ್ ನಿರ್ಧರಿಸಿದ ದಿನಾಂಕಗಳನ್ನು ಅನುಸರಿಸುತ್ತಿದೆ ಮತ್ತು ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ.

ಇನ್ನೂ, ಇತ್ತೀಚೆಗಷ್ಟೇ ಅಂತಿಮ ಸೆಮಿಸ್ಟರ್ ಹಾಗೂ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಎಲ್ಲಾರಾಜ್ಯಗಳಿಗೂ ನಿರ್ದೇಶನ ನೀಡಿದೆ. ಸೆಪ್ಟೆಂಬರ್ ಮುಗಿಯುವರೊಳಗಾಗಿ ಪರೀಕ್ಷೆಗಳನ್ನು ಮುಗಿಸಬೇಕೆಂದು ಸ್ಪಷ್ಟನೆ ನೀಡಿದೆ. ಹಾಗಾಗಿ ಕೇಂದ್ರ ಸರ್ಕಾರದ ಮಾರ್ಗ ಸೂಚಿಗನುಸಾರವಾಗಿ ಕಾಲೇಜು ತೆರೆಯಲು ನಿರ್ಧರಿಸಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಸೆಪ್ಟೆಂಬರ್-2019ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ ( CCERR, CCEPR, NSR ಮತ್ತು NSPR) ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲು ದೂರವಾಣಿ ಮುಖಾಂತರ, ಜೊತೆಗೆ ಕೆಲವು ವಿದ್ಯಾರ್ಥಿಗಳು,ಪೋಷಕರು ಖುದ್ದಾಗಿ, ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಗೆ ಮನವಿ ಮಾಡಿದ್ದಾರೆ.

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ ಪರೀಕ್ಷಾ ಶುಲ್ಕವನ್ನು ಪಾವತಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ದಿನಾಂಕ 28-08-2020ರವರೆಗೆ ಅವಕಾಶ ನೀಡಿದೆ.

English summary
Although there is no official order yet, the office of Deputy CM Dr C N Ashwath Narayan confirmed on Tuesday that colleges would begin offline classes from October 1. Dr Narayan is also Minister for Higher Education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X